ಮಂಗಳವಾರ, ಅಕ್ಟೋಬರ್ 27, 2020
24 °C

ಗಾಯಕ ಎಸ್‌ಪಿಬಿ ಆಸ್ಪತ್ರೆಯಿಂದ ಶೀಘ್ರವೇ ಬಿಡುಗಡೆ‌: ಪುತ್ರ ಚರಣ್‌ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದ್ದು, ಶೀಘ್ರವೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕೋವಿಡ್‌–19 ಸೋಂಕು ಇರುವುದು ದೃಢಪಟ್ಟ ಪರಿಣಾಮ ಆಗಸ್ಟ್‌ 5ರಂದು ಎಸ್‌ಪಿಬಿ ಅವರನ್ನು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೆಂಟಿಲೇಟರ್‌ ಅಳವಡಿಸಿ ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ನೆಗೆಟಿವ್‌ ಇರುವ ವರದಿ ಬಂದಿತ್ತು.

‘ಅಪ್ಪನ ಆರೋಗ್ಯದಲ್ಲಿ ಪ್ರತಿದಿನವೂ ಸುಧಾರಣೆ ಕಂಡುಬರುತ್ತಿದೆ. ನನಗೆ ಇದಕ್ಕಿಂತ ಖುಷಿ ಬೇರೊಂದಿಲ್ಲ. ಇಕೆಎಂಒ ಉಪಕರಣ ಮತ್ತು ವೆಂಟಿಲೇಟರ್ ಅಳವಡಿಸಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ಪಿಸಿಯೋಥೆರಪಿಯನ್ನೂ ಮಾಡಲಾಗುತ್ತಿದೆ. ಅಪ್ಪ ದ್ರವ ಆಹಾರ ಸೇವಿಸುತ್ತಿದ್ದಾರೆ. ಶೀಘ್ರವೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳುವುದನ್ನೇ ನಾನು ಎದುರು ನೋಡುತ್ತಿದ್ದೇನೆ’ ಎಂದು ಎಸ್‌ಪಿಬಿ ಅವರ ಪುತ್ರ ಎಸ್‌.ಪಿ. ಚರಣ್‌ ಟ್ವೀಟ್‌ ಮಾಡಿದ್ದಾರೆ.

ಚರಣ್‌ ನೀಡಿರುವ ಈ ಮಾಹಿತಿಯು ಎಸ್‌ಪಿಬಿ ಅವರ ಅಭಿಮಾನಿಗಳಲ್ಲಿ ಸಂತಸದ ಅಲೆಯನ್ನು ಉಕ್ಕಿಸಿದೆ. ಎಸ್‌ಬಿಪಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಶೀಘ್ರ ಮನೆಗೆ ಮರಳಲಿ ಎಂದು ‘ಸೂಪರ್‌ ಸ್ಟಾರ್’ ರಜನಿಕಾಂತ್‌, ಇಳೆಯರಾಜ ಸೇರಿದಂತೆ ತಮಿಳು ಚಿತ್ರರಂಗದ ಹಲವು ಗಣ್ಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು ಉಂಟು. ಕನ್ನಡ ಚಿತ್ರರಂಗದಿಂದಲೂ ಹಂಸಲೇಖ ಸೇರಿದಂತೆ ಹಲವು ನಟ, ನಟಿಯರು ಎಸ್‌ಬಿಪಿ ಅವರ ಚೇತರಿಕೆ ಸಂಬಂಧ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು