ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

Published 9 ಆಗಸ್ಟ್ 2023, 3:48 IST
Last Updated 9 ಆಗಸ್ಟ್ 2023, 3:48 IST
ಅಕ್ಷರ ಗಾತ್ರ

ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಮೃತದೇಹವನ್ನು ಥಾಯ್ಲೆಂಡ್‌ನಿಂದ ಬೆಂಗಳೂರಿಗೆ ತರಲಾಗಿದೆ. ಸ್ಪಂದನಾ ತಂದೆ ಬಿ.ಕೆ.ಶಿವರಾಂ ಅವರ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2.30ರ ವರೆಗೆ ವ್ಯವಸ್ಥೆ ಮಾಡಲಾಗಿದೆ.

ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕುಟುಂಬದ ಆಪ್ತರು, ಚಿತ್ರರಂಗ, ರಾಜಕೀಯ ವಲಯದ ಗಣ್ಯರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಇಂದು ಸಂಜೆ ಹರಿಶ್ಚಂದ್ರಘಾಟ್‌ನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದ್ದು, ಸಿದ್ಧತೆ ನಡೆದಿದೆ.

ಚಿತ್ರರಂಗದ ಅನೇಕರು ಸ್ಪಂದನಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿ, ನಿರ್ಮಾಪಕ ಎಸ್‌.ಎ.ಚಿನ್ನೇಗೌಡ ಅವರ ಸೊಸೆ ಸ್ಪಂದನಾ ವಾರದ ಹಿಂದೆ ತಮ್ಮ ಸೋದರ ಸಂಬಂಧಿಗಳ ಜೊತೆ ಪ್ರವಾಸಕ್ಕೆಂದು ಥಾಯ್ಲೆಂಡ್‌ಗೆ ತೆರಳಿದ್ದರು. ಭಾನುವಾರ ಮರಳಬೇಕಿತ್ತು. ಆದರೆ, ವಿಜಯ ರಾಘವೇಂದ್ರ ಚಿತ್ರೀಕರಣ ಮುಗಿಸಿಕೊಂಡ ನಂತರ ಭಾನುವಾರ ಬ್ಯಾಂಕಾಕ್‌ನಲ್ಲಿದ್ದ ಅವರನ್ನು ಸೇರಿಕೊಂಡಿದ್ದರು. ರಾತ್ರಿ ಮಲಗಿದ್ದ ಸ್ಪಂದನಾ ನಿದ್ರಾವಸ್ಥೆಯಲ್ಲಿಯೇ ನಿಧನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT