ಮಂಗಳವಾರ, ಮಾರ್ಚ್ 21, 2023
31 °C

ಗಾಯಕ ಎಸ್‌ಪಿಬಿಗೆ ಶ್ವಾಸಕೋಶದ ಕಸಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಸೋಮವಾರ ಕೋವಿಡ್‌–19 ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದಿದ್ದು, ಅವರ ಶ್ವಾಸಕೋಶದಲ್ಲಿ ಚೇತರಿಕೆ ಕಂಡುಬರುತ್ತದೆಂಬ ನಿರೀಕ್ಷೆಯಲ್ಲಿದ್ದೇವೆ’ ಎಂದು ಎಸ್‌ಬಿಪಿ ಅವರ ಪುತ್ರ ಎಸ್‌.ಪಿ. ಚರಣ್‌ ತಿಳಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ಆಗಸ್ಟ್‌ 5ರಂದು ಕೋವಿಡ್‌–19 ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎಸ್‌ಪಿಬಿ ಅವರನ್ನು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್‌ಪಿಬಿಗೆ ಈಗ 74 ವರ್ಷ. ಕೊರೊನಾ ಸೋಂಕಿನ ಪರಿಣಾಮ ಅವರ ಶ್ವಾಸಕೋಶಗಳಿಗೆ ಹಾನಿಯಾಗಿದೆ. ಶ್ವಾಸಕೋಶಗಳು ಉತ್ತಮವಾಗಿ ಕಾರ್ಯ ನಿರ್ವಹಿಸದ ಪರಿಣಾಮವೇ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಕೋವಿಡ್‌ ನೆಗೆಟಿವ್‌ ಬಂದಿದ್ದರೂ ಅವರಿಗೆ ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಪ್ರಸ್ತುತ ಎಂಜಿಎಂ ಹೆಲ್ತ್‌ಕೇರ್‌ ವೈದ್ಯರು ಎಸ್‌‍ಪಿಬಿಗೆ ಶ್ವಾಸಕೋಶದ ಕಸಿ ಮಾಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

‘ಕೆಲವು ವಾರಗಳ ಇದೇ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದ ರೋಗಿಗೆ ಯಶಸ್ವಿಯಾಗಿ ಶ್ವಾಸಕೋಶದ ಕಸಿ ಮಾಡಲಾಗಿದೆ. ಎಸ್‌ಪಿಬಿ ಅವರ ಕುಟುಂಬ ಕೂಡ ಅಂಗಾಂಗ ದಾನ ಸಂಬಂಧ ತಮಿಳುನಾಡಿನ ಆರೋಗ್ಯ ಸಚಿವಾಲಯದ ಅಂಗಾಂಗ ದಾನ ವಿಭಾಗದಲ್ಲಿ ನೋಂದಣಿ ಮಾಡಿಸಿದೆ. ಆದರೆ, ಕುಟುಂಬದ ಸದಸ್ಯರು ಇದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ’ ಎಂದು ‘ಇಂಡಿಯಾಗ್ಲಿಟ್ಜ್’ ವೆಬ್‌ಸೈಟ್‌ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು