ಗುರುವಾರ , ಆಗಸ್ಟ್ 11, 2022
21 °C

‘ಅಣ್ಣಾತೆ’ ಶೂಟಿಂಗ್‌ಗೆ ರಜನಿಕಾಂತ್‌ಗಾಗಿ ವಿಶೇಷ ವ್ಯವಸ್ಥೆ ಮಾಡಿದ ಚಿತ್ರತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಅಣ್ಣಾತೆ’ ಸಿನಿಮಾದ ಶೂಟಿಂಗ್‌ಗೆ ಎಲ್ಲಾ ತಯಾರಿ ನಡೆದಿದೆ. ಈ ತಿಂಗಳ ಮೂರನೇ ವಾರದಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ರಜನಿಕಾಂತ್ ತಮ್ಮ ಭಾಗದ ನಟನೆಯನ್ನು ಒಂದೇ ವೇಳಾಪಟ್ಟಿಯಲ್ಲಿ ಮುಗಿಸಲಿದ್ದು 45ದಿನಗಳ ಕಾಲ ನಿರಂತರವಾಗಿ ಶೂಟಿಂಗ್‌ನಲ್ಲಿ ಭಾಗವಹಿಸಲಿದ್ದಾರೆ.

2021ರ ಜನವರಿಯಲ್ಲಿ ರಜನಿ ತಮ್ಮ ರಾಜಕೀಯ ಪಕ್ಷವನ್ನು ಸಕ್ರಿಯಗೊಳಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಹೊಸವರ್ಷದ ಹೊಸ್ತಿಲಿನಲ್ಲಿ ರಜನಿ ತಮ್ಮ ಹೊಸ ಪಕ್ಷವನ್ನು ಉದ್ಘಾಟನೆ ಮಾಡಲಿದ್ದಾರೆ. ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗುವ ಮೊದಲು ತಮ್ಮ ಮುಂದಿನ ಸಿನಿಮಾಗಳನ್ನು ಮುಗಿಸುವ ಯೋಚನೆಯಲ್ಲಿದ್ದಾರೆ.

ಅಣ್ಣಾತೆ ಸಿನಿಮಾದ ಮುಂದಿನ ಭಾಗದ ಶೂಟಿಂಗ್‌ ಹೈದರಾಬಾದ್‌ನಲ್ಲಿ ನಡೆಯಲಿದೆ. ಚಿತ್ರತಂಡ ಎಲ್ಲಾ ಸುರಕ್ಷತೆಯೊಂದಿಗೆ ಶೂಟಿಂಗ್ ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ.

ಸದ್ಯದ ಸುದ್ದಿಯ ಪ್ರಕಾರ ಡಿಸೆಂಬರ್ 14ಕ್ಕೆ ಹೈದರಾಬಾದ್‌ಗೆ ತೆರಳಲಿರುವ ರಜನಿಕಾಂತ್‌ಗಾಗಿ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ ಚಿತ್ರತಂಡ. ಅಲ್ಲಿನ ಐಷಾರಾಮಿ ಹೋಟೆಲ್‌ನಲ್ಲಿ ಉಳಿಯುವ ವ್ಯವಸ್ಥೆ ಮಾಡಿದ್ದು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ನಡೆಯಲಿದೆ.

ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಕೀರ್ತಿ ಸುರೇಶ್, ನಯನತಾರ, ಮೀನಾ, ಖುಷ್ಬು, ಪ್ರಕಾಶ್‌ರಾಜ್‌ರಂತಹ ಪ್ರಮುಖ ನಟರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು