ಬಹುತೇಕ ಹೊಸಬರಿಂದಲೇ ಕೂಡಿರುವ ‘ಶ್ರೀಕೃಷ್ಣ’ ಚಿತ್ರದ ‘ಉದೋ ಉದೋ ಯಲ್ಲವ್ವ...’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಶಂಕರ್ರಾಜ ವರ್ಮ ನಟಿಸಿ, ನಿರ್ದೇಶಿಸಿರುವ ಚಿತ್ರವಿದು.

‘ಈ ಹಿಂದೆ ‘ಬ್ರಹ್ಮರಾಕ್ಷಸ’ ಎಂಬ ಚಿತ್ರ ಮಾಡಿದ್ದೆ. ಇದು ನನ್ನ ಎರಡನೇ ಚಿತ್ರ. ಈಗಾಗಲೇ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಲೋಚನೆಯಿದೆ. ಮೂವರು ಅನಾಥರ ಜೀವನದಲ್ಲಿ ಏನೆಲ್ಲ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದೆ. ಇಲ್ಲಿ ನಾಯಕಿ ಕೂಡ ಅನಾಥೆ’ ಎಂದರು ನಿರ್ದೇಶಕ.

ಹಾಡಿಗೆ ಎಂ.ಎಸ್.ತ್ಯಾಗರಾಜ್ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸುವುದರ ಜತೆಗೆ ಧ್ವನಿಯಾಗಿದ್ದಾರೆ. ಬೃಹಸ್ಪತಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣಗೊಂಡಿದೆ.

ಚೈತ್ರಾ ತೋಟದ ನಾಯಕಿ. ಪ್ರದೀಪ್ ಪೂಜಾರಿ, ಭುವನ್ ಗೌಡ, ಸ್ನೇಹಾ, ಈಶ್ವರ್ ಶೆಟ್ಟಿ ಮುಂತಾದವರು ನಟಿಸಿದ್ದು, ಅನಿರುದ್ಧ ಛಾಯಾಚಿತ್ರಗ್ರಹಣ ಹಾಗೂ ಕೀರ್ತಿರಾಜು ಅವರ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.