ಮಂಗಳವಾರ, ಸೆಪ್ಟೆಂಬರ್ 21, 2021
21 °C

ತೆರೆಯ ಮೇಲೂ ಜಿಮೇಲ್‌ ಡಾಟ್‌ಕಾಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀಕೃಷ್ಣ@ಜಿಮೇಲ್ ಡಾಟ್‌ ಕಾಮ್‌ ಚಿತ್ರವು ಚಿತ್ರೀಕರಣ ಮುಗಿಸಿದೆ. ಮೇಲುಕೋಟೆ, ಮೈಸೂರು ಸುತ್ತಮುತ್ತ ಹಾಡಿನ ಚಿತ್ರೀಕರಣ ನಡೆದಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ಲಾಂಛನದ ಅಡಿ ಸಂದೇಶ್‌ ನಾಗರಾಜ್‌ ಚಿತ್ರ ನಿರ್ಮಿಸುತ್ತಿದ್ದಾರೆ. ಒಟ್ಟು 90 ದಿನಗಳ ಚಿತ್ರೀಕರಣ ನಡೆದಿದೆ. ಮೈಸೂರಿನ ಸಂದೇಶ್‌ ಹೋಟೆಲ್‌ನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು.

ಡಾರ್ಲಿಂಗ್‌ ಕೃಷ್ಣ ಅಭಿನಯದ ಈ ಚಿತ್ರಕ್ಕೆ ನಾಗಶೇಖರ್‌ ಕಥೆ, ಚಿತ್ರಕಥೆ ಬರೆದಿದ್ದಾರೆ. ಭಾವನಾ ಈ ಚಿತ್ರದ ನಾಯಕಿ. ಚಂದನ್‌ ಗೌಡ ಇನ್ನೊಬ್ಬ ನಾಯಕ ಪಾತ್ರದಲ್ಲಿದ್ದಾರೆ. ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ಇದ್ದಾರೆ. ದತ್ತಣ್ಣ, ಸಾಧುಕೋಕಿಲ, ಚಿಕ್ಕಣ್ಣ, ಸಾತ್ವಿಕ್(ಕಾರ್ಪೊರೇಟರ್), ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ತಾರಾಗಣದಲ್ಲಿದ್ದಾರೆ. ಕವಿರಾಜ್‌ ಅವರ ಗೀತರಚನೆ ಇದೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಅರುಣ್ ಸಾಗರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು