ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಭಾವನಾ ಜೋಡಿಯ ಮೊದಲ ಚಿತ್ರದ ‘srikrishna@gmail.com’ ವಿಜಯ ದಶಮಿಯಂದು(ಅ.15) ತೆರೆಕಾಣಲಿದೆ.
ನಾಗಶೇಖರ್ ನಿರ್ದೇಶನದ ಈ ಚಿತ್ರವನ್ನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಈ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದಿದ್ದು ಚಿತ್ರಕಥೆಯನ್ನು ನಾಗಶೇಖರ್ ಹಾಗೂ ಪ್ರೀತಂಗುಬ್ಬಿ ಬರೆದಿದ್ದಾರೆ. ಚಂದನ್ ಗೌಡ ಎರಡನೇ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಟಿಸಿದ್ದು, ದತ್ತಣ್ಣ, ಸಾಧುಕೋಕಿಲ, ಅಚ್ಯುತ್ ರಾವ್, ಸಾತ್ವಿಕ್(ಕಾರ್ಪೊರೇಟರ್), ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಸಂದೇಶ್ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗಿದ್ದ ‘ಅಮರ್’ ಚಿತ್ರವನ್ನೂ ನಾಗಶೇಖರ್ ಅವರೇ ನಿರ್ದೇಶಿಸಿದ್ದರು. ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕವಿರಾಜ್ ಗೀತರಚನೆ ಮಾಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ದೀಪು ಎಸ್. ಕುಮಾರ್ ಹಾಗೂ ಅರುಣ್ ಸಾಗರ್ ಕಲಾ ನಿರ್ದೇಶನವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.