ಮಂಗಳವಾರ, ಸೆಪ್ಟೆಂಬರ್ 28, 2021
25 °C

ಡಿಸೆಂಬರ್‌ಗೆ ತೆರೆಗೆ ಬರಲು ‘ಮದಗಜ’ದ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್‌.ಮಹೇಶ್‌ ಕುಮಾರ್‌ ಆ್ಯಕ್ಷನ್‌ ಕಟ್‌ ಹೇಳಿರುವ, ಶ್ರೀಮುರುಳಿ ಹಾಗೂ ಆಶಿಕಾ ರಂಗನಾಥ್‌ ನಟನೆಯ ‘ಮದಗಜ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿದ್ದು, ಡಿಸೆಂಬರ್‌ನಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. 

ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಆರಂಭವಾಗಿದೆ. ಈ ಕುರಿತು ಮಹೇಶ್‌ ಅವರು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಗಸ್ಟ್‌ನಲ್ಲೇ ಚಿತ್ರದ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಚಿತ್ರೀಕರಣವೇ ವಿಳಂಬವಾಗಿತ್ತು. ಜುಲೈ 15ಕ್ಕೆ ಅಂತಿಮ ಹಂತದ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ ಅದ್ಧೂರಿಯಾದ ಮೂರು ಸೆಟ್‌ನಲ್ಲಿ ನಾಯಕನನ್ನು ಪರಿಚಯಿಸುವ ಹಾಡಿನ ಚಿತ್ರೀಕರಣ ನಡೆಸಿತ್ತು. ಈ ಚಿತ್ರದ ಮೂಲಕ ಮೊದಲ ಬಾರಿಗೆ ಶ್ರೀಮುರುಳಿ ಹಾಗೂ ಆಶಿಕಾ ಜೋಡಿಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಆಶಿಕಾ, ಹಳ್ಳಿ ಹುಡುಗಿಯ ಪಾತ್ರ ನಿರ್ವಹಿಸಿದ್ದಾರೆ. 

ತೆಲುಗಿನ ಖ್ಯಾತ ನಟ ಜಗಪತಿ ಬಾಬು ಖಳನಾಯಕನಾಗಿ, ಹಾಸ್ಯ ನಟರಾದ ರಂಗಾಯಣ ರಘು, ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌.ಪೇಟೆ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನವಿದ್ದು, ಉಮಾಪತಿ ಶ್ರೀನಿವಾಸಗೌಡ ಈ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ... ಧರ್ಮನಿಗೆ ತಡೆದುಕೊಳ್ಳಲಾಗುತ್ತಿಲ್ಲ ‘ಚಾರ್ಲಿ’ಯ ಟಾರ್ಚರ್‌!

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು