‘ಬಘೀರ’ ಚಿತ್ರದ ಬಳಿಕ ನಟ ಶ್ರೀಮುರಳಿ ಕೈಗೆತ್ತಿಕೊಂಡಿರುವ, ಹಾಲೇಶ್ ಕೋಗುಂಡಿ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಪರಾಕ್’ ಸೆಟ್ನಿಂದ ಹೊಸ ಸುದ್ದಿಯೊಂದು ಬಂದಿದೆ. ಚಿತ್ರದ ಸಾಹಸ ನಿರ್ದೇಶಕರಾಗಿ ರವಿವರ್ಮ ಕಾರ್ಯನಿರ್ವಹಿಸಲಿದ್ದಾರೆ.

ರವಿವರ್ಮ, ಸ್ಯಾಂಡಲ್ವುಡ್ ಮಾತ್ರವಲ್ಲ ಬಾಲಿವುಡ್ ಸ್ಟಾರ್ ಹೀರೊಗಳಾದ ಸಲ್ಮಾನ್ ಖಾನ್, ಶಾರುಖ್ ಖಾನ್ ಸಿನಿಮಾಗಳಿಗೆ ಸಾಹಸ ಸಂಯೋಜಿಸಿದ ಅನುಭವವಿರುವವರು. ಇದೀಗ ‘ಪರಾಕ್’ ಚಿತ್ರಕ್ಕೆ ರವಿವರ್ಮ ಸಾಹಸ ಸಂಯೋಜನೆ ಮಾಡಲಿದ್ದಾರೆ. ‘ಪರಾಕ್’ ಒಂದು ವಿಂಟೇಜ್ ಸ್ಟೈಲ್ನಲ್ಲಿ ನಡೆಯುವ ಸಿನಿಮಾವಾಗಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ಈ ಸಿನಿಮಾಗಿರಲಿದೆ. ಕಿರುಚಿತ್ರಗಳನ್ನು ಮಾಡಿ ಅನುಭವ ಹೊಂದಿರುವ ಹಾಲೇಶ್ ಕೋಗುಂಡಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ಅಡಿ ‘ಪರಾಕ್’ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಂದೀಪ್ ವಲ್ಲುರಿ ಛಾಯಾಚಿತ್ರಗ್ರಹಣ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.