ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾದೇವ’ನ ಖಳನಾಗಿ ಹೀಗಿದ್ದಾರೆ ಶ್ರೀನಗರ ಕಿಟ್ಟಿ

Last Updated 20 ಸೆಪ್ಟೆಂಬರ್ 2022, 9:39 IST
ಅಕ್ಷರ ಗಾತ್ರ

ನವೀನ್ ರೆಡ್ಡಿ ಬಿ. ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಮಾದೇವ’ ಸಿನಿಮಾ ಅಖಾಡಕ್ಕೆ ಇದೀಗ ಶ್ರೀನಗರ ಕಿಟ್ಟಿ ಪ್ರವೇಶಿಸಿದ್ದಾರೆ. 80ರ ದಶಕದ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ನಾಯಕ. ಶ್ರೀನಗರ ಕಿಟ್ಟಿ ಖಳನಾಯಕ. ಸಮುದ್ರ ಎಂಬ ಪವರ್ ಫುಲ್ ಪಾತ್ರದ ಮೂಲಕ ಶ್ರೀನಗರ ಕಿಟ್ಟಿ ಗ್ಯಾಂಗ್ ಸ್ಟಾರ್ ಆಗಿ ಅಬ್ಬರಿಸಲಿದ್ದಾರೆ. ಹಾಗಾಗಿ ಅವರ ಲುಕ್‌ ಬೇರೆಯೇ ರೀತಿಯಾಗಿದೆ.

ಆರ್. ಕೇಶವ್ ದೇವಸಂದ್ರ ‘ಮಾದೇವ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಲವ್ ಗುರು ಸಮಂತ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೃತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ನಟಿಸುತ್ತಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್‌ಗೆ ಜೋಡಿಯಾಗಿ ಸೋನಲ್ ಮೋಂಥೆರೊ ನಾಯಕಿಯಾಗಿದ್ದಾರೆ. ಬಾಲಕೃಷ್ಣ ಥೋಟ ಛಾಯಾಗ್ರಹಣ, ಪ್ರದ್ಯೋತ್ಥನ್ ಸಂಗೀತ ಸಿನಿಮಾಕ್ಕಿದೆ.

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿ, ಮದ್ದೂರು, ಕನಕಪುರ, ಚನ್ನಪಟ್ಟಣ ಭಾಗದಲ್ಲಿ ಶೇಕಡ ಐವತ್ತರಷ್ಟು ಶೂಟಿಂಗ್ ಮುಗಿಸಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನು ಮಲೆನಾಡು ಶಿವಮೊಗ್ಗ ಸೇರಿದಂತೆ ಇತರ ಭಾಗಗಳಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT