ಗುರುವಾರ , ಮೇ 6, 2021
23 °C

‘ಶ್ರೀರಂಗ’ ನಿಗೆ ಹಿನ್ನೆಲೆ ಸಂಗೀತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸ್ಯ ಕತೆ ಹೊಂದಿರುವ ಚಿತ್ರ ‘ಶ್ರೀರಂಗ’ದ ಚಿತ್ರೀಕರಣ ಮುಕ್ತಾಯವಾಗಿದೆ. ಹಿನ್ನೆಲೆ ಸಂಗೀತ ಅಳವಡಿಕೆ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ 21 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಕೊರೋನಾ ಅಲೆ ಕಡಿಮೆಯಾದರೆ ಆಗಸ್ಟ್‌ ವೇಳೆಗೆ ಚಿತ್ರವು ತೆರೆ ಕಾಣಲಿದೆ ಎಂದು ಚಿತ್ರತಂಡ ಹೇಳಿದೆ.

ರತು ಕ್ರಿಯೇಷನ್ಸ್ ಲಾಂಛನದಲ್ಲಿ ಸುಮಾ ಅವರು ಚಿತ್ರ ನಿರ್ಮಿಸುತ್ತಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶಿಸುತ್ತಿದ್ದಾರೆ. ಸಮೀರ್ ಕುಲಕರ್ಣಿ ಸಂಗೀತ ನೀಡುತ್ತಿದ್ದಾರೆ. ಒಂದು ಪರಿಚಯಾತ್ಮಕ ಹಾಡನ್ನು ವಿರಾಜ್ ಕನ್ನಡಿಗ ಬರೆದು ಹಾಡಿದ್ದಾರೆ. ಮಿಥುನ್ ಛಾಯಾಗ್ರಹಣ ಹಾಗೂ ಚಂದನ್ ಅವರ ಸಂಕಲನವಿದೆ. ಶಂಕರ್ ರಾಮನ್ ಸಂಭಾಷಣೆ ಬರೆದಿದ್ದಾರೆ.

ಗುರುರಾಜ ಹೊಸಕೋಟೆ, ಯಮುನಾ ಶ್ರೀನಿಧಿ, ಶಿನವ, ರಚನಾ ರೈ, ಮಾಸ್ಟರ್ ಚಿರಾಯು ಚಕ್ರವರ್ತಿ, ರೂಪ ರಾಯಪ್ಪ(ಕೆಜಿಎಫ್), ವಂದನಾ ಶೆಟ್ಟಿ, ಸಾಗರ್ ಜಯರಾಂ, ಸೂಪರ್ ದೇವು, ರಾಮಕೃಷ್ಣ, ಜ್ಯೋತಿ ಮೂರುರ್, ವೆಂಕಟ್ ಭಾರದ್ವಾಜ್
ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು