ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G20 Summit: ಆರ್‌ಆರ್‌ಆರ್‌ ಸಿನಿಮಾ ಮೆಚ್ಚಿಕೊಂಡ ಬ್ರೆಜಿಲ್‌ ಅಧ್ಯಕ್ಷ

Published 10 ಸೆಪ್ಟೆಂಬರ್ 2023, 10:35 IST
Last Updated 10 ಸೆಪ್ಟೆಂಬರ್ 2023, 10:35 IST
ಅಕ್ಷರ ಗಾತ್ರ

ಬೆಂಗಳೂರು: ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ ಡ ಸಿಲ್ವ ಅವರು ಭಾರತದ ‘ಆರ್​ಆರ್​ಆರ್‘ ಸಿನಿಮಾವನ್ನು ಮೆಚ್ಚಿಕೊಂಡು ಚಿತ್ರದ ಬಗ್ಗೆ ಮಾತನಾಡಿದ್ದಾರೆ.

ಭಾರತದ ಬಗ್ಗೆ ಯಾರೇ ಮಾತನಾಡಿದರೂ ಆರ್‌ಆರ್‌ಆರ್‌ ಸಿನಿಮಾದ ಬಗ್ಗೆ ಕೇಳುತ್ತಾರೆ. ನನ್ನನ್ನು ಮೋಡಿ ಮಾಡಿರುವ ಈ ಚಿತ್ರದ ನಿರ್ದೇಶಕರು ಮತ್ತು ಕಲಾವಿದರನ್ನು ಅಭಿನಂದಿಸುತ್ತೇನೆ ಎಂದು ಲೂಯಿಸ್‌ ಇನಾಸಿಯೊ ಹೇಳಿದ್ದಾರೆ.

ಸಿನಿಮಾದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ನಿರ್ದೇಶಕ ರಾಜಮೌಳಿ ಎಕ್ಸ್‌ ಮಾಡಿದ್ದಾರೆ.

ಆರ್​ಆರ್​ಆರ್ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ಆದಾಯಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT