ಬೆಂಗಳೂರು: ಬಹುನಿರೀಕ್ಷಿತ ಹಾಗೂ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದ ಶೀರ್ಷಿಕೆ ಅನಾವರಣವಾಗಿದೆ.

ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿರುವ #Globetrotter ಕಾರ್ಯಕ್ರಮದಲ್ಲಿ ಎಸ್.ಎಸ್. ರಾಜಮೌಳಿ–ಮಹೇಶ್ ಬಾಬು ಅವರ SSMB29 ಸಿನಿಮಾಕ್ಕೆ ‘ವಾರಾಣಸಿ’ ಎಂದು ಹೆಸರಿಡಲಾಗಿದೆ.

ಬೃಹತ್ ಎಲ್ಇಡಿ ಪರದೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದ ನಡುವೆ ರಾಜಮೌಳಿ ಅವರ ಸಿನಿಮಾದ ಶೀರ್ಷಿಕೆ ಹಾಗೂ ಮಹೇಶ್ ಬಾಬು ಅವರ ಫಸ್ಟ್ ಲುಕ್ ಅನಾವರಣಗೊಂಡಿದೆ. ಅಭಿಮಾನಿಗಳು ಭಾರಿ ಜೈಕಾರ ಶಿಳ್ಳೆಗಳೊಂದಿಗೆ ಶೀರ್ಷಿಕೆಯನ್ನು ಸ್ವಾಗತಿಸಿದರು.

ಮಹೇಶ್ಬಾಬು, ನಂದಿಯನ್ನು ಏರಿ ಭರ್ಜರಿಯಾಗಿ ಎಂಟ್ರಿ ಕೊಡುವ ದೃಶ್ಯವನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಈ ಕುರಿತು ಲೈವ್ ಕಾರ್ಯಕ್ರಮದ ಸಂಗತಿಗಳನ್ನು ಅಭಿಮಾನಿಗಳು ಎಕ್ಸ್ ಹಾಗೂ ಸಾಮಾಜಿಕ ವೇದಿಕೆಗಳಲ್ಲಿ ಹಂಚಿಕೊಂಡಿದ್ದಾರೆ.

ಜಿಯೋ ಹಾಟ್ ಸ್ಟಾರ್ನಲ್ಲಿ ಈ ಕಾರ್ಯಕ್ರಮ ಅಧಿಕೃತವಾಗಿ ಇನ್ನೇನು ಪ್ರಸಾರವಾಗಲಿದೆ

ಮಹೇಶ್ ಬಾಬು ಪ್ರಮುಖ ಪಾತ್ರದಲ್ಲಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ನಡೆದಿದ್ದು ಇದೇ ಕಾರ್ಯಕ್ರಮದಲ್ಲಿ ಇನ್ನಷ್ಟು ರೋಚಕ ಸಂಗತಿಗಳು ಬಹಿರಂಗವಾಗಲಿವೆ ಎನ್ನಲಾಗಿದೆ.

ಆ ಕಾರ್ಯಕ್ರಮದಲ್ಲಿ ರಾಜಮೌಳಿ, ಮಹೇಶ್ ಬಾಬು, ಪೃಥ್ವಿರಾಜ್ ಸುಕುಮಾರನ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಗಣ್ಯರು ಭಾಗವಹಿದ್ದಾರೆ.

ರಾಜಮೌಳಿ ಅವರ ತಂದೆ ಎಸ್ಎಸ್ ವಿಜಯೇಂದ್ರ ಪ್ರಸಾದ್ ಅವರ ಕಥೆ ಹೊಂದಿರುವ ಈ ಹೊಸ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಆಫ್ರಿಕಾದ ದಟ್ಟ ಕಾಡುಗಳಲ್ಲಿ ಚಿತ್ರೀಕರಣವಾಗುತ್ತಿದೆ. ಇತ್ತೀಚೆಗೆ ಶೂಟಿಂಗ್ನ ವಿಡಿಯೊ ತುಣಕೊಂದು ಸೋರಿಕೆಯಾಗಿದ್ದು ವೈರಲ್ ಆಗಿದೆ.

ಇನ್ನು, ಮೊನ್ನೆಯಷ್ಟೇ ರಾಜಮೌಳಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಾಗಿರುವ ಕುಂಭನ ಪರಿಚಯವನ್ನು ಹಾಗೂ ಮಂದಾಕಿನಿ ಪರಿಚಯ ಮಾಡಿದ್ದರು. ಕುಂಭನಾಗಿ ಪೃಥ್ವಿರಾಜ್ ಸುಕುಮಾರನ್, ಮಂದಾಕಿನಿಯಾಗಿ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಂಡಿದ್ದು ತೀವ್ರ ಕುತೂಹಲ ಮೂಡಿಸಿದೆ.
.ಎಸ್.ಎಸ್ ರಾಜಮೌಳಿ ಚಿತ್ರದಲ್ಲಿ ನಟಿ ಪ್ರಿಯಾಂಕಾ ಚೋಪ್ರಾ: ಪೋಸ್ಟರ್ ಬಿಡುಗಡೆ.ರಾಜಮೌಳಿ ಚಿತ್ರದಲ್ಲಿ ಹಾಡಿದ ನಟಿ ಶ್ರುತಿ ಹಾಸನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.