ಮಂಗಳವಾರ, ಆಗಸ್ಟ್ 4, 2020
24 °C

ಅಸ್ಸಾಂ, ಬಿಹಾರ ಜನತೆಗಾಗಿ ಮಿಡಿದ ತಾರಾ ದಂಪತಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾರಾ ದಂಪತಿಗಳಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೊನಾಸ್, ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಪ್ರವಾಹದಿಂದ ಹಾನಿಗೊಳಗಾದ ಅಸ್ಸಾಂ ಮತ್ತು ಬಿಹಾರದ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

‘ನಾವೆಲ್ಲರೂ ಇನ್ನೂ ಜಾಗತಿಕ ಸಾಂಕ್ರಾಮಿಕ ಕೊರೊನಾದ ವಿರುದ್ಧ ಹೋರಾಡುತ್ತಿರುವಾಗಲೇ ಅಸ್ಸಾಂ, ಬಿಹಾರ ರಾಜ್ಯಗಳು ಮತ್ತೊಂದು ಆಪತ್ತು ಎದುರಿಸುತ್ತಿವೆ. ಲಕ್ಷಾಂತರ ಜನರ ಜೀವನವನ್ನು ಮಾನ್ಸೂನ್ ಮಳೆಯ ಪ್ರವಾಹ ಅಸ್ತವ್ಯಸ್ತಗೊಳಿಸಿದೆ. ವಿಶ್ವದ ಅತ್ಯುತ್ತಮ ವನ್ಯಜೀವಿ ಅಭಯಾರಣ್ಯಗಳಲ್ಲಿ ಒಂದಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲೂ ಪ್ರವಾಹದ ನೀರಿನ ಮಟ್ಟವು ವೇಗವಾಗಿ ಏರುತ್ತಿದೆ’ ಎಂದು ಪ್ರಿಯಾಂಕ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

‘ಅಸ್ಸಾಂ ಜನತೆಗೆ ನಮ್ಮೆಲ್ಲರ ಬೆಂಬಲ ಮತ್ತು ನೆರವು ಅಗತ್ಯವಿದೆ. ಕೆಲವು ವಿಶ್ವಾಸಾರ್ಹ ಸಂಘಟನೆಗಳು ಅಸ್ಸಾಂನಲ್ಲಿ ಅತ್ಯುತ್ತಮವಾಗಿ ಪ‍ರಿಹಾರ ಕಾರ್ಯಗಳನ್ನು ಕೈಗೊಂಡಿವೆ. ನಾನು ಮತ್ತು ಪತಿ ನಿಕ್‌ ಆ ಸಂಘಟನೆಗಳಿಗೆ ದೇಣಿಗೆ ನೀಡಿದ್ದೇವೆ. ಸಂತ್ರಸ್ತರಿಗೆ ಸಹಾಯ ಮಾಡಲು ನಾವೆಲ್ಲರೂ ಕೈಜೋಡಿಸೋಣ’ ಎಂದು ಪ್ರಿಯಾಂಕಾ ಮನವಿ ಮಾಡಿದ್ದಾರೆ.

 

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಕೂಡ ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

 

 

ವಿರಾಟ್ ಮತ್ತು ಅನುಷ್ಕಾ ದಂಪತಿ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದು, ‘ಅಸ್ಸಾಂ ಮತ್ತು ಬಿಹಾರದಲ್ಲಿ ಉಂಟಾಗಿರುವ ಪ್ರವಾಹವು ಜನಜೀವನ ಅಸ್ತವ್ಯಸ್ತಗೊಳಿಸಿದೆ. ಎರಡೂ ರಾಜ್ಯದ ಜನತೆಗೆ ನೆರವಿನ ಅಗತ್ಯವಿದೆ. ಈ ರಾಜ್ಯಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಆ್ಯಕ್ಷನ್ ಏಡ್ ಇಂಡಿಯಾ, ರ‍್ಯಾಪಿಡ್ ರೆಸ್ಪಾನ್ಸ್ ಮತ್ತು ಗೂಂಜ್ ಸಂಘಟನೆಗಳಿಗೆ ಬೆಂಬಲ ನೀಡುವ ಮೂಲಕ ಅಗತ್ಯವಿರುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ದೇಶದ ನಾಗರಿಕರು ಎರಡು ರಾಜ್ಯಗಳ ಜನರಿಗೆ ನೆರವು ನೀಡಲು ಮುಂದಾಗಬೇಕು’ ಎಂದು ಮನವಿ ಮಾಡಿದ್ದಾರೆ.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು