ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಿಮ್ಲಾ ನಾಯಕ್' ಟ್ರೈಲರ್‌: ಪವನ್‌ ಲುಕ್‌ಗೆ ಅಭಿಮಾನಿಗಳು ಫಿದಾ

Last Updated 22 ಫೆಬ್ರುವರಿ 2022, 7:12 IST
ಅಕ್ಷರ ಗಾತ್ರ

ಹೈದರಾಬಾದ್: ನಟ ಪವನ್ ಕಲ್ಯಾಣ್ ಅವರ ಬಹುನಿರೀಕ್ಷಿತ ‘ಭಿಮ್ಲಾ ನಾಯಕ್' ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ.

ಪವನ್‌ ಅಭಿಮಾನಿಗಳು ಭಿಮ್ಲಾ ನಾಯಕ್' ಟ್ರೈಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುಟ್ಯೂಬ್‌ನಲ್ಲಿ ಗುರುರಾತ್ರಿ 9 ಗಂಟೆ ಟ್ರೈಲರ್‌ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾಗಿ 15 ಗಂಟೆಗಳಲ್ಲಿ 93 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಸದ್ಯ ಈ ಟ್ರೈಲರ್‌ ಯುಟ್ಯೂಬ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ನಲ್ಲಿದೆ. 10 ಲಕ್ಷಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದು ಸಾವಿರಾರು ಜನರು ಟ್ರೈಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್‌ ಮಾಡುತ್ತಿದ್ದಾರೆ.

ಈ ಮೊದಲು ಸಿನಿಮಾವನ್ನು ಏಪ್ರಿಲ್‌ ತಿಂಗಳ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿಕೆ ನೀಡಿತ್ತು. ಇದೀಗ ಫೆಬ್ರುವರಿ 25ಕ್ಕೆ ತೆರೆಗೆ ಬರಲಿದೆ ಎಂದು ಚಿತ್ರತಂಡ ಖಚಿತಪಡಿಸಿದೆ.

ಮಲಯಾಳಂನ ಸೂಪರ್ ಹಿಟ್ ‘ಅಯ್ಯಪ್ಪನ್ ಕೋಶಿಯಂ‘ ಸಿನಿಮಾದ ರಿಮೇಕ್ ಆಗಿರುವ 'ಭಿಮ್ಲಾ ನಾಯಕ್‌' ಸಿನಿಮಾವನ್ನು ಸಾಗರ್ ಕೆ ಚಂದ್ರ ಅವರು ನಿರ್ದೇಶಿಸಿದ್ದಾರೆ.

ಪವನ್ ಕಲ್ಯಾಣ್, ರಾಣಾ ದಗ್ಗುಭಾಟಿ, ನಿತ್ಯಾ ಮೆನನ್, ಸಂಯುಕ್ತಾ ಮೆನನ್ ಪ್ರಮುಖ ತಾರಾಗಣದಲ್ಲಿದ್ದಾರೆ. ಸಿತಾರಾ ಎಂಟರಟೈನ್‌ಮೆಂಟ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT