ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಚ್ಚನ ‘ಫ್ಯಾಂಟಮ್‌’ ಚಿತ್ರೀಕರಣ ಶುರು

Last Updated 16 ಜುಲೈ 2020, 14:51 IST
ಅಕ್ಷರ ಗಾತ್ರ

ಸುದೀಪ್‌ ನಟನೆಯ ‘ಫ್ಯಾಂಟಮ್‌’ ಸಿನಿಮಾ ಚಿತ್ರೀಕರಣ ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೊದಲ್ಲಿ ಗುರುವಾರ ಬೆಳಿಗ್ಗೆ ಆರಂಭವಾಯಿತು.

ಕೊರೊನಾ ಲಾಕ್‌ಡೌನ್‌ನಿಂದಾಗಿ ಈ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿತ್ತು. ನಟ ಸುದೀಪ್‌ ಮತ್ತು ಸಹ ಕಲಾವಿದರು ಚಿತ್ರತಂಡದೊಂದಿಗೆ ಹೈದರಾಬಾದ್‌ಗೆ ತೆರಳಿದ್ದಾರೆ.

ಶಾಲಿನಿ ಆರ್ಟ್ಸ್ ಬ್ಯಾನರ್‌ನಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅನೂಪ್‌ ಭಂಡಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವಿಘ್ನೇಶ್ವರನಿಗೆ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಚಿತ್ರೀಕರಣ ಆರಂಭಿಸಲಾಗಿದೆ. ಸುಮಾರು 50 ದಿನಗಳ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯಲಿದೆ. ಕೊರೊನಾ ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಸ್ಪರ ಅಂತರ ಕಾಯ್ದುಕೊಳ್ಳಲಾಗುತ್ತಿದೆ ಎಂದುಸುದೀಪ್‌ ಅವರ ಮ್ಯಾನೇಜರ್‌ ಮತ್ತುಫ್ಯಾಂಟಮ್‌ ಚಿತ್ರದ ನಿರ್ಮಾಪಕ ಜಾಕ್‌ ಮಂಜು ‘ಪ್ರಜಾಪ್ಲಸ್‌’ಗೆ ತಿಳಿಸಿದ್ದಾರೆ.

‘ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಕಾರ್ಮಿಕರು ಕೆಲಸವಿಲ್ಲದೆ ಜೀವನ ನಿರ್ವಹಣೆಗೆ ಪರಿತಪಿಸುತ್ತಿದ್ದಾರೆ. ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಯುತ್ತಿರುವ ಕಾರಣಕ್ಕೆ ಅನ್ಯ ರಾಜ್ಯದ ಕಾರ್ಮಿಕರಿಗೆ ಕೆಲಸ ನೀಡಿ, ನಮ್ಮವರಿಗೆ ಕೆಲಸ ಇಲ್ಲದಂತೆ ಮಾಡಬಾರದೆಂದುಕರ್ನಾಟಕ ರಾಜ್ಯ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳೂ ಮನವಿ ಮಾಡಿದ್ದರು. ಸುದೀಪ್‌ ಅವರ ಒತ್ತಾಸೆಯಂತೆರಾಜ್ಯದಿಂದ ಸುಮಾರು 250 ಮಂದಿ ಸಿನಿಮಾ ಕಾರ್ಮಿಕರನ್ನು ಹೈದರಾಬಾದ್‌ಗೆ ಕರೆತಂದಿದ್ದೇವೆ. ಲೈಟ್ಸ್‌ನಿಂದ ಹಿಡಿದು ಪ್ರತಿಯೊಂದನ್ನು ಬೆಂಗಳೂರಿನಿಂದಲೇ ಕೊಂಡೊಯ್ದಿದ್ದೇವೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT