ಬುಧವಾರ, ಡಿಸೆಂಬರ್ 8, 2021
25 °C

‘ವೈಲ್ಡ್ ಕರ್ನಾಟಕ’ ಸಾಕ್ಷ್ಯಚಿತ್ರ: ತಡೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವೈಲ್ಡ್ ಕರ್ನಾಟಕ’ ಅಥವಾ ‘ಇಂಡಿಯಾಸ್ ವೈಲ್ಡ್ ಕರ್ನಾಟಕ’ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮುಂದಿನ ವಿಚಾರಣೆ ತನಕ ವಿಸ್ತರಣೆ ಮಾಡಿದೆ.

ರವೀಂದ್ರ ರೆಡ್ಕರ್ ಮತ್ತು ಆರ್.ಕೆ. ಉಲ್ಲಾಸ್ ಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ 2021ರ ಜುಲೈನಲ್ಲಿ ಮಧ್ಯಂತರ ಆದೇಶ ನೀಡಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯನ್ನು ನ.17ಕ್ಕೆ ಮುಂದೂಡಿದೆ.

‘ಈ ಚಿತ್ರವನ್ನು ಜಗತ್ತಿನಾದ್ಯಂತ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಚಿತ್ರ ನಿರ್ಮಾಣ ವಿಷಯದಲ್ಲಿ ಖಾಸಗಿ ವ್ಯಕ್ತಿಗಳೊಂದಿಗೆ ಅರಣ್ಯ ಇಲಾಖೆ ಮಾಡಿಕೊಂಡಿರುವ ಒಪ್ಪಂದವು ಕೆಟಿಪಿಪಿ(ಕರ್ನಾಟಕ ಪಾರದರ್ಶಕ) ಕಾಯ್ದೆ ಪ್ರಕಾರ ಇಲ್ಲ. ಅದರಲ್ಲಿರುವ ಷರತ್ತುಗಳು ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಆಗುವ ರೀತಿಯಲ್ಲಿವೆ. ಹೀಗಾಗಿ, ಸಾಕ್ಷ್ಯಚಿತ್ರದ ಪ್ರಸಾರಕ್ಕೆ ತಡೆ ನೀಡಬೇಕು’ ಎಂದು ಕೋರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು