ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಬಾಲಿವುಡ್‌ ನಟ ಇಮ್ರಾನ್‌ ಹಶ್ಮಿ ಮೇಲೆ ಕಲ್ಲು ತೂರಾಟ

Last Updated 20 ಸೆಪ್ಟೆಂಬರ್ 2022, 3:06 IST
ಅಕ್ಷರ ಗಾತ್ರ

ಪಹಲ್ಗಾಂ (ಜಮ್ಮು ಮತ್ತು ಕಾಶ್ಮೀರ): ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ ಬಾಲಿವುಡ್‌ ನಟ ಇಮ್ರಾನ್‌ ಹಶ್ಮಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ.

ಈ ಸಂಬಂಧ ಪಹಲ್ಗಾಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಟ ಇಮ್ರಾನ್ ಹಶ್ಮಿ ತಮ್ಮ ಮುಂಬರುವ ‘ಗ್ರೌಂಡ್ ಜೀರೊ‘ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಅವರು ಎರಡು ದಿನಗಳ ಹಿಂದೆಪಹಲ್ಗಾಂನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಶೂಟಿಂಗ್‌ ಮುಗಿಸಿಕೊಂಡು ಅವರು ಮಾರುಕಟ್ಟೆಗೆ ಬಂದಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯತನಕ ಪೊಲೀಸರು ಯಾರನ್ನು ಬಂದಿಸಿಲ್ಲ ಎಂದು ಹೇಳಿದ್ದಾರೆ. ಸಿಸಿ ಕ್ಯಾಮೆರಾ ಪರಿಶೀಲನೆ ಮಾಡುಲಾಗುತ್ತಿದ್ದು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ.

ಗ್ರೌಂಡ್ ಜೀರೊ ಸಿನಿಮಾವನ್ನು ತೇಜಸ್ ದಿಯೋಸ್ಕರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT