ಗುರುವಾರ , ಸೆಪ್ಟೆಂಬರ್ 19, 2019
21 °C

ವಿದ್ಯಾರ್ಥಿನಿ ಮಧು ಸಾವು: ತನಿಖೆಗೆ ಆಗ್ರಹಿಸಿದ ನಟ ದರ್ಶನ್

Published:
Updated:

ಬೆಂಗಳೂರು: ರಾಯಚೂರಿನ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಮಧು ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ತ್ವರಿತವಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.

ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನುಬದ್ಧವಾಗಿ ತಕ್ಕ ಶಾಸ್ತಿಯಾಗಬೇಕು. ಅತ್ಯಾಚಾರ ಮತ್ತು ಕೊಲೆ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

Post Comments (+)