ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುದೀಪ್‌ ವಿರುದ್ಧ ಹೇಳಿಕೆ ನೀಡದಂತೆ ನಿರ್ಮಾಪಕರಿಗೆ ನಿರ್ಬಂಧ

Published 21 ಆಗಸ್ಟ್ 2023, 20:28 IST
Last Updated 21 ಆಗಸ್ಟ್ 2023, 20:28 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರನಟ ಸುದೀಪ್ ವಿರುದ್ಧ ಯಾವುದೇ ರೀತಿಯ ಮಾನಹಾನಿ ಹೇಳಿಕೆ ನೀಡದಂತೆ ಚಿತ್ರ ನಿರ್ಮಾಪಕರಾದ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರಿಗೆ ನಿರ್ಬಂಧ ವಿಧಿಸಿ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

‘ನನ್ನ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಎಂ.ಎನ್.ಕುಮಾರ್ ಮತ್ತು ಎಂ.ಎನ್. ಸುರೇಶ್ ಮೇಲೆ ಪ್ರತಿಬಂಧಕ ಆದೇಶ ಹೊರಡಿಸಬೇಕು‘ ಎಂದು ಕೋರಿ ಸುದೀಪ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 11ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಕುರಿತಂತೆ ಆದೇಶಿಸಿದೆ.

ಮಾನಹಾನಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಎಂ.ಎನ್. ಕುಮಾರ್ ಮತ್ತು ಎಂ.ಎನ್. ಸುರೇಶ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ನಗರದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ 2023ರ ಆಗಸ್ಟ್ 11ರಂದು ಆದೇಶಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT