ಮಂಗಳವಾರ, ಜನವರಿ 18, 2022
23 °C

ಒಟಿಟಿಯಲ್ಲಿ ಸುದೀಪ್‌ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಅಮೆಜಾನ್‌ ಒಟಿಟಿಯಲ್ಲಿ ಬಿಡುಗಡೆಯಾಗಿದೆ.  

ಈ ಹಿಂದೆ ನವೆಂಬರ್‌ 23ಕ್ಕೆ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿತ್ತು.ಇದೀಗ ಸಿನಿಮಾ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಒಂದು ತಿಂಗಳಿಗೆ ಒಟಿಟಿ ವೇದಿಕೆಯಲ್ಲಿ ಕೋಟಿಗೊಬ್ಬ–3 ಸಿನಿಮಾ ಬಿಡುಗಡೆಯಾಗಿರುವುದು ವಿಶೇಷ. 

ಶಿವ ಕಾರ್ತಿಕ್‌ ನಿರ್ದೇಶನದ ಈ ಸಿನಿಮಾವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದಾರೆ. 

ಕಿಚ್ಚ ಸುದೀಪ್‌, ಮಡೋನಾ ಸೆಬಾಸ್ಟಿಯನ್‌, ಅಫ್ತಾಬ್‌ ಶಿವದಾಸಾನಿ, ನವಾಬ್‌ ಶಾ, ಶ್ರದ್ಧಾ ದಾಸ್‌, ರವಿಶಂಕರ್‌ ನಟಿಸಿದ್ದು ಅರ್ಜುನ್‌ ಜನ್ಯಾ ಸಂಗೀತ ನೀಡಿದ್ದಾರೆ. 

ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಉತ್ತಮ ಗಳಿಕೆ ಕಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು