ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ್‌ಗೆ ‘ಸಿಂಪಲ್‌’ ಆ್ಯಕ್ಷನ್‌

Last Updated 5 ಜನವರಿ 2023, 20:00 IST
ಅಕ್ಷರ ಗಾತ್ರ

‘ಅವತಾರ ಪುರುಷ’ ಸಿನಿಮಾ ಬಳಿಕ, ‘ಗತವೈಭವ’ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿರುವ ನಿರ್ದೇಶಕ ‘ಸಿಂಪಲ್‌’ ಸುನಿ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ರೊಮ್ಯಾಂಟಿಕ್‌ ಸಬ್ಜೆಕ್ಟ್‌ ಚಿತ್ರದಲ್ಲಿ ನಟ ವಿನಯ್‌ ರಾಜ್‌ಕುಮಾರ್‌ ಅವರಿಗೆ ಆ್ಯಕ್ಷನ್‌ ಕಟ್‌ ಹೇಳಲು ಸುನಿ ಸಿದ್ಧತೆ ಆರಂಭಿಸಿದ್ದಾರೆ.

ಸದ್ಯ ‘ಪೆಪೆ’ ಹಾಗೂ ‘ಅಂದೊಂದಿತ್ತು ಕಾಲ’ ಸಿನಿಮಾಗಳ ರಿಲೀಸ್‌ಗೆ ವಿನಯ್‌ ಎದುರು ನೋಡುತ್ತಿದ್ದಾರೆ. ಈ ನಡುವೆ ಅವರು ಸುನಿಗೆ ಕಾಲ್‌ಶೀಟ್‌ ನೀಡಿದ್ದಾರೆ. ವಿಶೇಷ ಏನೆಂದರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ಅವರಿಗೆ ಸುನಿ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸುನಿ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ.

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸುನಿ ಸದ್ಯದಲ್ಲೇ ಚಿತ್ರದ ಶೀರ್ಷಿಕೆ, ತಾರಾಬಳಗ ಎಲ್ಲವುದರ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಹಣವಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT