ನವದೆಹಲಿ: ಜಾಟ್ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಅದರ ಮುಂದುವರಿದ ಭಾಗವಾಗಿ ‘ಜಾಟ್–2’ ನಿರ್ಮಿಸಲಾಗುವುದು ಎಂದು ನಟ ಸನ್ನಿ ದೇವಲ್ ಹೇಳಿದ್ದಾರೆ.

ಈ ಚಿತ್ರಕ್ಕೂ ಗೋಪಿಚಂದ್ ಮಲಿನೇನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಏ. 10ರಂದು ತೆರೆಕಂಡ ಜಾಟ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಂದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್ ಮತ್ತು ಸಯಾಮಿ ಖೇರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬಾಕ್ಸ್ ಆಫೀಸ್ನಲ್ಲಿ ಈವರೆಗೂ ಈ ಚಿತ್ರ ₹70 ಕೋಟಿ ಗಳಿಕೆ ಕಂಡಿದೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೊಸ ಚಿತ್ರದ ವಿಷಯವನ್ನು ಹಂಚಿಕೊಂಡಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.