ಶನಿವಾರ, ಏಪ್ರಿಲ್ 4, 2020
19 °C

ಮಕ್ಕಳು ಈ ರೀತಿ ಬದುಕಬೇಕಾಗಿರುವುದು ಬೇಸರದ ಸಂಗತಿ: ಸನ್ನಿ ಲಿಯೋನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಇಡೀ ವಿಶ್ವವೇ ಕೊರೊನಾ ವೈರಸ್‌ ಸೋಂಕಿನ ಭೀತಿಯಲ್ಲಿದೆ. ಬಾಲಿವುಡ್ ಮಾದಕ ನಟಿ ಸನ್ನಿ ಲಿಯೋನ್ ನನ್ನ ಮಕ್ಕಳು  ಮಾಸ್ಕ್ ಹಾಕಿಕೊಳ್ಳಬೇಕಾಗಿರುವುದು ಬೇಸರದ ಸಂಗತಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.

ಮೂವರು ಮಕ್ಕಳೊಂದಿಗೆ ಸನ್ನಿ ಲಿಯೋನ್‌, ಪತಿ ಡೇನಿಯಲ್‌ ಮಾಸ್ಕ್‌ ಧರಿಸಿರುವ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸನ್ನಿ, ನನ್ನ ಮಕ್ಕಳು ಹೀಗೆ ಬದುಕಬೇಕಾಗಿರುವುದು ಬೇಸರದ ಸಂಗತಿ ಎಂದು ಹೇಳಿದ್ದಾರೆ. 

ಇದು ಹೊಸ ಯುಗ, ನನ್ನ ಮಕ್ಕಳು ಈ ರೀತಿಯಾಗಿ ಮಾಸ್ಕ್‌ ಹಾಕಿಕೊಂಡಿರುವುದು ದುಃಖದ ಸಂಗತಿಯಾಗಿದೆ. ಈ ರೀತಿ ಇರುವುದು ಬಹು ಮುಖ್ಯವಾಗಿದೆ. ಈಗಾಗಲೇ ನಾನು ಮಕ್ಕಳಿಗೆ ಮಾಸ್ಕ್ ಧರಿಸುವುದನ್ನ ಅಭ್ಯಾಸ ಮಾಡಿಸುತ್ತಿದ್ದೇನೆ ಎಂದು ಬರೆದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು