ಗುರುವಾರ , ಮೇ 26, 2022
26 °C

ಮಧುಬನ್ ಹಾಡಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ಸನ್ನಿ ಲಿಯೋನ್‌ ವಿರುದ್ಧ ಆಕ್ರೋಶ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Sunny Leone Instagram Post

ಬೆಂಗಳೂರು: ಗಾಯಕಿ ಕನ್ನಿಕಾ ಕಪೂರ್ ಹಾಡಿರುವ ಮಧುಬನ್ ಹಾಡಿನಲ್ಲಿ ನಟಿ ಸನ್ನಿ ಲಿಯೋನ್ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಸಾಮಾಜಿಕ ತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಯೂಟ್ಯೂಬ್‌ನಲ್ಲಿ ‘ಮಧುಬನ್‘ ಹಾಡು ಬಿಡುಗಡೆಯಾಗಿದ್ದು, ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರು ನಿರ್ದೇಶನ ಮಾಡಿದ್ದಾರೆ.

ಈ ಹಾಡಿಗೆ ಹೆಜ್ಜೆ ಹಾಕಿರುವ ನಟಿ ಸನ್ನಿ ಲಿಯೋನ್, ‘ರಾಧೆ‘ ಮತ್ತು ‘ಮಧುಬನ್‘ಗೆ ಅವಮಾನ ಮಾಡಿದ್ದಾರೆ. ಹಿಂದೂಗಳ ಭಾವನೆಗೆ ಈ ಹಾಡು ಧಕ್ಕೆ ತಂದಿದೆ ಎಂದು ಸಾಮಾಜಿಕ ತಾಣಗಳಲ್ಲಿ ಆರೋಪ ಕೇಳಿಬಂದಿದೆ.

ಜತೆಗೆ, ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ನೆಟ್ಟಿಗರು, ಸನ್ನಿ ಲಿಯೋನ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು