ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಪರ್‌ಸ್ಟಾರ್ ರಜನಿಕಾಂತ್ ಹೊಸ ಸಿನಿಮಾದ ಟೈಟಲ್ ಅನಾವರಣ

ಅಕ್ಷರ ಗಾತ್ರ

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರ 169ನೇ ಸಿನಿಮಾದ ಟೈಟಲ್ ಅನಾವರಣವಾಗಿದ್ದು, ರಜನಿ ಅಭಿಮಾನಿಗಳಿಗೆ ಸಂತಸ ನೀಡಿದೆ.

ಹೌದು ಬೀಸ್ಟ್ ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಘೋಷಣೆಯಾಗಿದ್ದ #ತಲೈವಾ169 ಪ್ರೊಜೆಕ್ಟ್‌ನ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ ಜೈಲರ್ ಎಂದು ಹೆಸರಿಡಲಾಗಿದೆ.

ಸನ್‌ ಪಿಕ್ಚರ್ಸ್‌ ಬ್ಯಾನರ್ ಅಡಿ ಈ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದ್ದು, ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ಪೋಸ್ಟರ್ ನೋಡಿದರೆ ಇದೊಂದು ಪಕ್ಕಾ ಮಾಸ್ ಆಕ್ಷನ್ ಸಿನಿಮಾ ಎಂದು ತೋರುತ್ತದೆ.

ಈ ವರ್ಷಾರಂಭದಲ್ಲಿ ರಜನಿಕಾಂತ್ ಅವರ ಅಣ್ಣಾತ್ತೆ ಬಿಡುಗಡೆಯಾಗಿತ್ತು. ಚಿತ್ರ ಉತ್ತಮ ಪ್ರಶಂಸೆ ಕೂಡ ಪಡೆದಿತ್ತು. ಇದೀಗ ರಜನಿ ಅವರು ಜೈಲರ್ ಆಗಿ ಮತ್ತೆ ಬಣ್ಣ ಹಚ್ಚಿದ್ದಾರೆ.

ಇನ್ನು ಜೈಲರ್ ಸಿನಿಮಾಕ್ಕೆ ಅನಿರುದ್ಧ ರವಿಚಂದರ್ ಅವರ ಸಂಗೀತವಿದ್ದು, ನಾಯಕಿ ಹಾಗೂ ಉಳಿದ ತಾರಾಗಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT