ಶನಿವಾರ, ಮೇ 28, 2022
31 °C

ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Rajinikanth PTI IMAGE

ಬೆಂಗಳೂರು: ನಟ ರಜನಿಕಾಂತ್ ಅವರಿಗೆ ಭಾನುವಾರ ಡಿಸೆಂಬರ್ 12ರಂದು ಹುಟ್ಟುಹಬ್ಬದ ಸಂಭ್ರಮ. ಸೂಪರ್‌ಸ್ಟಾರ್ 71ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ.

ಸಾಮಾಜಿಕ ತಾಣಗಳಲ್ಲಿ ಕೂಡ ಅತ್ಯಂತ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನಿಕಾಂತ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್, ಆರಂಭದಲ್ಲಿ ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕರಾಗಿಯೂ ಕಾರ್ಯನಿರ್ವಹಿಸಿದ್ದರು.

1975ರಲ್ಲಿ ಕೆ. ಬಾಲಚಂದರ್ ಅವರ ತಮಿಳು ಸಿನಿಮಾ ಅಪೂರ್ವ ರಾಗಂಗಳ್ ಮೂಲಕ ಅವರು ಚಿತ್ರರಂಗ ಪ್ರವೇಶಿಸಿದರು.

ರಜನಿಕಾಂತ್ ಅವರು ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮ ವಿಭೂಷಣ, ಎನ್‌ಟಿಆರ್ ರಾಷ್ಟ್ರೀಯ ಪ್ರಶಸ್ತಿ, ಪದ್ಮ ಭೂಷಣ ಮತ್ತು ಹಲವಾರು ಪ್ರಶಸ್ತಿಗಳು ಸಂದಿವೆ.

ಇತ್ತೀಚೆಗೆ ರಜನಿಕಾಂತ್ ಅವರ ಅಣ್ಣಾತ್ತೆ ಸಿನಿಮಾ ಬಿಡುಗಡೆಯಾಗಿದ್ದು, ಬಳಿಕ ಅಮೆಜಾನ್ ಪ್ರೈಮ್‌ನಲ್ಲಿ ಲಭ್ಯವಾಗಿದೆ.

 

 

ರಜನಿ ಹುಟ್ಟುಹಬ್ಬ: 71 ಅಡಿ ಉದ್ದದ ಕೇಕ್ ಕತ್ತರಿಸಿದ ಅಭಿಮಾನಿಗಳು
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು