ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ‘ವೆಟ್ಟೈಯಾನ್‌’ ಅಕ್ಟೋಬರ್‌ನಲ್ಲಿ ತೆರೆಗೆ

Published 8 ಏಪ್ರಿಲ್ 2024, 3:13 IST
Last Updated 8 ಏಪ್ರಿಲ್ 2024, 3:13 IST
ಅಕ್ಷರ ಗಾತ್ರ

ಬೆಂಗಳೂರು; ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ವೆಟ್ಟೈಯಾನ್‌‘ 2024ರ ಅಕ್ಟೋಬರ್‌ನಲ್ಲಿ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿನಿಮಾ ನಿರ್ಮಣ ಸಂಸ್ಥೆ ಲೈಕಾ ಪ್ರೊಡಕ್ಷನ್, ಇದೇ ಅಕ್ಟೋಬರ್‌ನಲ್ಲಿ ನೆಚ್ಚಿನ ತಲೈವಾರನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಬಹುದು ಎಂದು ಅಭಿಮಾನಿಗಳಿಗೆ ತಿಳಿಸಿದೆ.

ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ವೆಟ್ಟೈಯಾನ್‌ ಚಿತ್ರದಲ್ಲಿ ವಿಭಿನ್ನ ಲುಕ್‌ನಲ್ಲಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹಲವು ವರ್ಷಗಳ ಬಳಿಕ ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರು ತಲೈವಾ ಜತೆ ಬೆಳ್ಳಿ ತೆರೆಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರಕ್ಕೆ ‘ಜೈ ಭೀಮ್‌‘ ಖ್ಯಾತಿಯ ಟಿಜೆ ಜ್ಞಾನವೇಲ್ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಇರುವ ಈ ಚಿತ್ರವನ್ನು ಲೈಕಾ ನಿರ್ಮಾಣ ಸಂಸ್ಥೆ ನಿರ್ಮಿಸಿದೆ.

ತಿರುವನಂತಪುರಂ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲೂ ಚಿತ್ರದ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಮಂಜು ವಾರಿಯರ್, ಕಿಶೋರ್, ರಿತಿಕಾ ಸಿಂಗ್, ದುಶಾರ ವಿಜಯನ್, ಜಿ.ಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಸುಪ್ರೀತ್ ರೆಡ್ಡಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT