ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರೇಶ್‌ ಅರಸ್‌ಗೆ ಅಂತರರಾಷ್ಟ್ರೀಯ ಪ್ರಶಸ್ತಿ

Last Updated 1 ಜೂನ್ 2022, 10:36 IST
ಅಕ್ಷರ ಗಾತ್ರ

ಬೆಂಗಳೂರು:ಅಮೆರಿಕದ ಡಲ್ಲಾಸ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‌ ಗಾಂಧಿ’ ಚಿತ್ರದ ಸಂಕಲನಕ್ಕಾಗಿ ಸುರೇಶ್‌ ಅರಸ್‌ ಅವರಿಗೆ ಅತ್ಯುತ್ತಮ ಸಂಕಲನಕಾರ ಪ್ರಶಸ್ತಿ ಲಭಿಸಿದೆ.

‘ಈಗಾಗಲೇ ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸುರೇಶ್‌ ಅರಸ್‌ ಅವರು ಈಗ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇದಕ್ಕಾಗಿ ಇಡೀ ಚಿತ್ರತಂಡವು ಅವರನ್ನು ಅಭಿನಂದಿಸುತ್ತದೆ’ ಎಂದು ಬರಗೂರು ಅವರು ತಿಳಿಸಿದ್ದಾರೆ.

ಕಸ್ತೂರ್‌ ಬಾ ಗಾಂಧಿಯವರ ಜೀವನದ ಮುಖ್ಯ ಘಟನೆಗಳನ್ನು ಆಧರಿಸಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ, ಬರಗೂರು ಅವರೇ ಚಿತ್ರಕಥೆ, ಸಂಭಾಷಣೆ ಮತ್ತು ಗೀತೆಗಳನ್ನು ಬರೆದಿದ್ದಾರೆ. ಬಿ.ಜಿ. ಗೀತಾ ಅವರು ತಮ್ಮ ಮಿತ್ರ ಮೂವೀಸ್‌ ಸಂಸ್ಥೆಯಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಕಸ್ತೂರ್‌ ಬಾ ಪಾತ್ರದಲ್ಲಿ ನಟಿ ಹರಿಪ್ರಿಯಾ ಹಾಗೂ ಗಾಂಧಿ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್‌ ಅಭಿನಯಿಸಿದ್ದಾರೆ. ಖ್ಯಾತ ನಟರಾದ ಶ್ರೀನಾಥ್‌, ಸುಂದರರಾಜ್‌, ನಟಿ ಪ್ರಮೀಳಾ ಜೋಷಾಯ್‌ ಅವರಲ್ಲದೆ ರೇಖಾ, ಸುಂದರರಾಜ ಅರಸು, ವೆಂಕಟರಾಜು, ರಾಘವ್‌, ವತ್ಸಲಾ ಮೋಹನ್‌ ಮುಂತಾದವರು ತಾರಾಗಣದಲ್ಲಿದ್ದಾರೆ. ಮಾಸ್ಟರ್‌ ಆಕಾಂಕ್ಷ್‌ ಬರಗೂರ್‌ ಬಾಲಕ ಗಾಂಧಿಯಾಗಿ, ಕುಮಾರಿ ಸ್ಪಂದನ ಬಾಲಕಿ ಕಸ್ತೂರ್‌ ಬಾ ಆಗಿ ನಟಿಸಿದ್ದಾರೆ. ಚಿತ್ರಕ್ಕೆ ನಾಗರಾಜ್‌ ಅದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್‌ ಸಂಗೀತ, ಮೈತ್ರಿ ಬರಗೂರು ಅವರ ಕಲಾ ನಿರ್ದೇಶನ ಇದೆ.

ಕಸ್ತೂರ್‌ ಬಾ ಅವರ ಬದುಕಿನ ನೆಲೆಯಲ್ಲಿ ಗಾಂಧೀಜಿಯವರನ್ನು ಕಾಣುವ ವಿಶಿಷ್ಟ ದೃಷ್ಟಿಕೋನದಲ್ಲಿ ಇಬ್ಬರ ವ್ಯಕ್ತಿತ್ವಗಳನ್ನು ಚಿತ್ರಿಸಿರುವುದು ಈ ಸಿನಿಮಾದ ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT