ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Kanguva Trailer: ಸೂರ್ಯ ಅಭಿನಯದ ಕಂಗುವ ಟ್ರೇಲರ್ ಬಿಡುಗಡೆ

ಇದೇ ವರ್ಷ ಅಕ್ಟೋಬರ್ 10ರಂದು 10 ಭಾಷೆಗಳಲ್ಲಿ ಜಗತ್ತಿನಾದ್ಯಂತ ಏಕಕಾಲಕ್ಕೆ ಚಿತ್ರ ಬಿಡುಗಡೆಯಾಗಲಿದೆ
Published 12 ಆಗಸ್ಟ್ 2024, 9:43 IST
Last Updated 12 ಆಗಸ್ಟ್ 2024, 9:43 IST
ಅಕ್ಷರ ಗಾತ್ರ

ಚೆನ್ನೈ: ನಟ ಸೂರ್ಯ ಅಭಿನಯದ ‘ಕಂಗುವ’ ಸಿನಿಮಾದ ಟ್ರೇಲರ್ ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು ಚಿತ್ರರಸಿಕರ ಗಮನ ಸೆಳೆದಿದೆ.

Saregama ಚಾನಲ್‌ನಲ್ಲಿ ಈ ಟ್ರೇಲರ್ ಬಿಡುಗಡೆಯಾಗಿದೆ. ರಜನಿಕಾಂತ್‌ ಅವರ ‘ಅಣ್ಣಾತ್ತೆ’ ಸೇರಿದಂತೆ ಹಿಟ್‌ ಸಿನಿಮಾಗಳನ್ನು ನೀಡಿದ್ದ ಶಿವ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಪ್ರಾಚೀನ ಕಾಲದ ಆದಿವಾಸಿ ಜನಾಂಗದ ನಾಯಕನ ಕಥೆ ಹೊಂದಿರುವ ಈ ಚಿತ್ರದ ಟ್ರೇಲರ್‌ನಲ್ಲಿ ಸೂರ್ಯ ಅವರೊಂದಿಗೆ ಬಾಲಿವುಡ್ ನಟ ಬಾಬಿ ದೇವೊಲ್ ಅವರು ಅಬ್ಬರಿಸಿದ್ದಾರೆ.

‘ಸಿಂಗಂ’, ‘ಪರುತ್ತಿವೀರನ್’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ಕೆ.ಇ.ಜ್ಞಾನವೇಲ್ ರಾಜ, ತಮ್ಮ ಸ್ಟೂಡಿಯೋ ಗ್ರೀನ್ ಸಂಸ್ಥೆಯಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇದೇ ವರ್ಷ ಅಕ್ಟೋಬರ್ 10ರಂದು ಕನ್ನಡವೂ ಸೇರಿದಂತೆ 10 ಭಾಷೆಗಳಲ್ಲಿ ಜಗತ್ತಿನಾದ್ಯಂತ ಏಕಕಾಲಕ್ಕೆ ಚಿತ್ರ ಬಿಡುಗಡೆಯಾಗಲಿದೆ

ಬಾಲಿವುಡ್‌ನ ನಟಿ ದಿಶಾ ಪಠಾಣಿ ಈ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ‘ರಾಕ್ ಸ್ಟಾರ್’ ಎಂದೇ ಜನಪ್ರಿಯರಾಗಿರುವ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ, ವೆಟ್ರಿ ಪಳನಿಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT