ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸೂರ್ಯ 44’ ಚಿತ್ರೀಕರಣದ ವೇಳೆ ನಟ ಸೂರ್ಯ ತಲೆಗೆ ಗಾಯ

Published 10 ಆಗಸ್ಟ್ 2024, 14:00 IST
Last Updated 10 ಆಗಸ್ಟ್ 2024, 14:00 IST
ಅಕ್ಷರ ಗಾತ್ರ

ಚೆನ್ನೈ: ಊಟಿಯಲ್ಲಿ ‘ಸೂರ್ಯ 44’ ಚಿತ್ರೀಕರಣದ ವೇಳೆ ತಮಿಳು ನಟ ಸೂರ್ಯ ಅವರ ತಲೆಗೆ ಸಣ್ಣಪುಟ್ಟ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ರಾಜಶೇಖರ್ ಪಾಂಡಿಯನ್ ‘ಸೂರ್ಯ ಅವರಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಅಭಿಮಾನಿಗಳು ಈ ಬಗ್ಗೆ ಆತಂಕ ಪಡುವುದು ಬೇಡ. ನಿಮ್ಮ ಪ್ರೀತಿ ಮತ್ತು ಪ್ರಾರ್ಥನೆಗಳಿಂದ ಅವರು ಸುರಕ್ಷಿತವಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

‘ಸೂರ್ಯ 44’ ಚಿತ್ರೀಕರಣ ತಾತ್ಕಾಲಿಕ ಸ್ಥಗಿತವಾಗಿದ್ದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಚಿತ್ರಕ್ಕೆ ಕಾರ್ತಿಕ್‌ ಸುಬ್ಬರಾಜ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ. ಮಾರ್ಚ್‌ 28ರಂದು ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು.

‘ಸೂರ್ಯ 44’ ಟೈಟಲ್‌ ತಾತ್ಕಾಲಿಕ ಚಿತ್ರದ ಹೆಸರಾಗಿದ್ದು, ಈ ಚಿತ್ರವು 2025ಕ್ಕೆ ತೆರೆ ಮೇಲೆ ಬರಲಿದೆ ಎಂದು ಚಿತ್ರ ತಂಡ ತಿಳಿಸಿದೆ.

ಸೂರ್ಯ ಅಭಿನಯದ ‘ಕಂಗುವ’ ಸಿನಿಮಾವು ಇದೇ ಅಕ್ಟೋಬರ್‌ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜ, ತಮ್ಮ ಸ್ಟೂಡಿಯೋ ಗ್ರೀನ್ ಸಂಸ್ಥೆಯಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರಜನಿಕಾಂತ್‌ ಅವರ ‘ಅಣ್ಣಾತ್ತೆ’ ಸೇರಿದಂತೆ ಹಿಟ್‌ ಸಿನಿಮಾಗಳನ್ನು ನೀಡಿದ್ದ ಶಿವ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT