ಮುಂಬೈ: ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ದೀಪೇಶ್ ಸಾವಂತ್ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರಿಗೂ ಜಾಮೀನು ದೊರೆತಿದೆ. ಆದರೆ, ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರಿಯಾ ಪರ ವಕೀಲ ಸತೀಶ್ ಮನೇಶಿಂದೆ, 'ಬಾಂಬೆ ಹೈಕೋರ್ಟ್ ನೀಡಿರುವ ಆದೇಶದಿಂದ ನಾವು ಸಂತೋಷಗೊಂಡಿದ್ದೇವೆ. ಸತ್ಯ ಮತ್ತು ನ್ಯಾಯವು ಮೇಲುಗೈ ಸಾಧಿಸಿದೆ' ಎಂದು ಹೇಳಿದ್ದಾರೆ.

'ರಿಯಾಳ ಬಂಧನ ಕಾನೂನಿನ ವ್ಯಾಪ್ತಿಯನ್ನು ಮೀರಿತ್ತು. ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಎನ್ಸಿಬಿ ಸಂಸ್ಥೆಗಳು ರಿಯಾ ವಿರುದ್ಧ ನಡೆಸುತ್ತಿರುವ ಅನಗತ್ಯ ವಿಚಾರಣೆ ಕೊನೆಗೊಳ್ಳಬೇಕು. ನಾವು ಸತ್ಯಕ್ಕೆ ಬದ್ಧರಾಗಿರುತ್ತೇವೆ' ಎಂದು ಮನೇಶಿಂದೆ ತಿಳಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.