ಮುಂಬೈ: ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರು ನೇಣು ಬಿಗಿದುಕೊಂಡಿದ್ದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದ 34 ವರ್ಷದ ನಟನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿತ್ತು. ಮುಂಬೈನ ಡಾ. ಆರ್.ಎನ್. ಕೂಪರ್ ಮುನ್ಸಿಪಲ್ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಸ್ಪತ್ರೆಯು ಸೋಮವಾರ ಮುಂಗಡ ಪ್ರಮಾಣಪತ್ರವನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಬಿಹಾರ ಮರುಕ: ಸಿಬಿಐ ತನಿಖೆಗೆ ಆಗ್ರಹ

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಶಾಂತ್ ಕಳೆದ ಆರು ತಿಂಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅವರ ಒಳಾಂಗಗಳ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗಾಗಿ ಸಂರಕ್ಷಿಸಲಾಗಿದೆ ಮತ್ತು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ.

ಇಂದು ಅವರ ಅಂತ್ಯಕ್ರಿಯೆಗಾಗಿ ಸುಶಾಂತ್ ಅವರ ಕುಟುಂಬ ಸದಸ್ಯರು ಪಾಟ್ನಾದಿಂದ ಭಾನುವಾರ ರಾತ್ರಿ ಮುಂಬೈಗೆ ಆಗಮಿಸಿದ್ದಾರೆ. ಸುಶಾಂತ್ ಅವರ ನಿವಾಸದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲದ ಕಾರಣದಿಂದಾಗಿ ಅವರ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಪೊಲೀಸರು ಅವರ ವೈದ್ಯಕೀಯ ದಾಖಲೆಗಳು ಸೇರಿದಂತೆ ಕೆಲವು ವಸ್ತುಗಳನ್ನು ತನಿಖೆಗಾಗಿ ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು...

ಸುಶಾಂತ್... ನಿಮಗೀ ಮಾತುಗಳು ನೆನಪಾಗಲಿಲ್ವೆ?

ಯಾರು ಈ ದಿಶಾ ಸಾಲಿಯಾನ್? ಸುಶಾಂತ್ ಸಿಂಗ್ ಸಾವಿನ ಹಿಂದೆ ದಿಶಾ ಅಂತ್ಯದ ಛಾಯೆ!

ಯಾಕೆ ಹೀಗೆ ಮಾಡಿದಿರಿ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಅಭಿಮಾನಿಗಳ ಕಂಬನಿ

ಧೋನಿ ಪಾತ್ರಕ್ಕೆ ಜೀವ ತುಂಬಿದವ ಜೀವ ಬಿಟ್ಟಾಗ...

‘ಕ್ಷಣಿಕ ಜೀವನ...’ ಮುನ್ನೆಲೆಗೆ ಬಂದ ಸುಶಾಂತ್ ಸಿಂಗ್ ಇನ್ಸ್ಟಾಗ್ರಾಂ ಪೋಸ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.