ಶುಕ್ರವಾರ, ಜನವರಿ 27, 2023
27 °C

ಸ್ವೀಟಿ ಸಿನಿಮಾ ಯೂಟ್ಯೂಬ್‌‌ಗೆ ಅಪ್‌ಲೋಡ್: ದೂರು ನೀಡಿದ ನಟಿ ರಾಧಿಕಾ ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟಿ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: 'ಸ್ವೀಟಿ ನನ್ನ ಜೋಡಿ' ಸಿನಿಮಾವನ್ನು ಅಕ್ರಮವಾಗಿ ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದ್ದು, ಈ ಸಂಬಂಧ ನಿರ್ಮಾಪಕಿಯೂ ಆಗಿರುವ ನಟಿ ರಾಧಿಕಾ ಕುಮಾರಸ್ವಾಮಿ ಅವರು ಉತ್ತರ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

'ಸಿನಿಮಾ ಪೈರಸಿ ಮಾಡಿರುವ ಕಿಡಿಗೇಡಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು' ಎಂದು ರಾಧಿಕಾ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

2013ರಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ನಟಿಸಿದ್ದ ಸ್ವೀಟಿ ನನ್ನ ಜೋಡಿ ಸಿನಿಮಾವನ್ನು ಅವರೇ ನಿರ್ಮಿಸಿದ್ದರು. ನಿರ್ಮಾಪಕರ ಅನುಮತಿ ಪಡೆಯದೆ ಯೂಟ್ಯೂಬ್‌ಗೆ ಸಿನಿಮಾ ಅಪ್‌ಲೋಡ್ ಮಾಡಲಾಗಿದೆ. ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವೀಟಿ ನನ್ನ ಜೋಡಿ ಚಿತ್ರ ನಿರ್ಮಿಸಲಾಗಿತ್ತು. 

ರಾಧಿಕಾ ಕುಮಾರಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು