ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರ್‌ಆರ್‌ಆರ್‌' ಸಿನಿಮಾದ ಆಡಿಯೊ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ

ಅಕ್ಷರ ಗಾತ್ರ

ಹೈದರಾಬಾದ್‌: ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ‘ಆರ್‌ಆರ್‌ಆರ್‌’ (ರೈಸ್‌–ರೋರ್‌–ರಿವೋಲ್ಟ್‌) ಸಿನಿಮಾದ ಆಡಿಯೊ ಹಕ್ಕುಗಳನ್ನು ಟಿ–ಸೀರಿಸ್‌ ಹಾಗೂ ಲಹರಿ ಮ್ಯೂಸಿಕ್‌ ಸಂಸ್ಥೆಗಳು ಖರೀದಿ ಮಾಡಿವೆ.

ಟಿ–ಸೀರಿಸ್‌ ಸಂಸ್ಥೆ ಅಧಿಕೃತವಾಗಿ ಟ್ವೀಟ್‌ ಮಾಡಿ ಆಡಿಯೊ ಹಕ್ಕುಗಳನ್ನು ಖರೀದಿಸಿರುವ ಮಾಹಿತಿಯನ್ನು ಹಂಚಿಕೊಂಡಿದೆ.

ಪಂಚ ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಈ ಸಿನಿಮಾವನ್ನು ಸುಮಾರು ₹400 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಎಂ.ಕೀರವಾಣಿ ಸಂಗೀತ ಸಂಯೋಜನೆ ಮಾಡಿರುವ ಈ ಸಿನಿಮಾದ ಆಡಿಯೊ ಹಕ್ಕುಗಳನ್ನು ₹25 ಕೋಟಿಗೆ ಖರೀದಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಈ ಹಿಂದೆ ಕೆ.ಜಿ.ಎಫ್‌–2 ಸಿನಿಮಾದ ಆಡಿಯೊ ಹಕ್ಕು ₹7.20 ಕೋಟಿಗೆ ಮಾರಾಟವಾಗಿತ್ತು.

ಟಿ–ಸೀರಿಸ್‌ ಆಡಿಯೊ ಹಕ್ಕು ಖರೀದಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆಯಾದರೂ ಅಧಿಕೃತ ಮೊತ್ತವನ್ನು ಬಹಿರಂಗಪಡಿಸಿಲ್ಲ.

ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಆರಂಭದಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕುಮರಾಂ ಭೀಮ್‌ ಅವರ ಜೀವನವನ್ನು ಆಧರಿಸಿದ ಕಥೆ. ಈ ಚಿತ್ರದಲ್ಲಿ ಚರಣ್ ರಾಮರಾಜು ಪಾತ್ರದಲ್ಲಿ, ಎನ್‌ಟಿಆರ್ ಜೂನಿಯರ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಈ ಸಿನಿಮಾವನ್ನು ಬರುವ ಅಕ್ಟೋಬರ್‌ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT