ಮುಂಬೈ: ಟಿ-ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ವಿರುದ್ಧ ಶುಕ್ರವಾರ ಅತ್ಯಾಚಾರ ಪ್ರಕರಣ ದಾಖಲಾಗಿದೆ.
'ಕ್ಯಾಸೆಟ್ ಕಿಂಗ್' ಎಂದೇ ಖ್ಯಾತರಾಗಿದ್ದ ದಿವಂಗತ ಗುಲ್ಶನ್ ಕುಮಾರ್ ಪುತ್ರ ಭೂಷಣ್ ಕುಮಾರ್ ಅವರು 30 ವರ್ಷದ ಮಹಿಳೆಯೊಬ್ಬರಿಗೆ ಕೆಲಸ ನೀಡುವ ಆಮಿಷ ಒಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಅಂಧೇರಿಯಲ್ಲಿರುವ (ಪಶ್ಚಿಮ) ಡಿ.ಎನ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳ, ಸಮಯದ ಬಗೆಗಿನ ವಿವರಗಳನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ.
'ತಮ್ಮ ಸ್ವಂತ ಕಂಪನಿಯಲ್ಲಿ ಉದ್ಯೋಗ ನೀಡುವ ನೆಪದಲ್ಲಿ ಮಹಿಳೆಯ ಮೇಲೆ ಭೂಷಣ್ ಕುಮಾರ್ ಅತ್ಯಾಚಾರ ಎಸಗಿದ್ದಾರೆ' ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ 'ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ'ಗೆ ಮಾಹಿತಿ ಒದಗಿಸಿದ್ದಾರೆ.
ಅಧಿಕಾರಿಯ ಪ್ರಕಾರ, ಭೂಷಣ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ), 420 (ವಂಚನೆ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.