ಬುಧವಾರ, ಏಪ್ರಿಲ್ 21, 2021
23 °C

ಮಾರ್ಚ್ 15ರಿಂದ ‘ತಾಜ್ ಮಹಲ್ 2’ ಕೊನೆಯ ಹಂತದ ಚಿತ್ರೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀ ಗಂಗಾಂಬಿಕಾ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ದೇವರಾಜಕುಮಾರ್ ನಿರ್ದೇಶನದ ‘ತಾಜ್ ಮಹಲ್-2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಮಾರ್ಚ್ 15ರಿಂದ ಆರಂಭವಾಗಲಿದೆ.

ಬೆಂಗಳೂರಿನ ಎಚ್‌ಎಂಟಿ ಲೇಔಟ್‌ನಲ್ಲಿ 6 ದಿನಗಳ‌ ಕಾಲ ಸಾಹಸ ಸನ್ನಿವೇಶ ಹಾಗೂ ಹಾಡಿನ‌ ನಿರ್ದೇಶನ ನಡೆಯಲಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ.‌ ಮೇಯಲ್ಲಿ ಟೀಸರ್‌ ಬಿಡುಗಡೆಯಾಗಲಿದೆ. ದೇವರಾಜ್ ಕುಮಾರ್ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ವೀನಸ್ ಮೂರ್ತಿ ಅವರ ಛಾಯಾಗ್ರಹಣವಿದೆ.

ಮನ್ವರ್ಷಿ ನವಲಗುಂದ ಸಂಭಾಷಣೆ ಹಾಗೂ ಹಾಡುಗಳನ್ನು ಬರೆದಿದ್ದಾರೆ. ವಿಕ್ರಮ್ ಸೆಲ್ವ ಸಂಗೀತ ನಿರ್ದೇಶನ, ಚಂದ್ರು ಬಂಡೆ ಸಾಹಸ ನಿರ್ದೇಶನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ. ಈ ಚಿತ್ರಕ್ಕೆ ವಿಜಯ್ ಅವರು ಸಂಕಲನ ಮಾಡುತ್ತಿದ್ದಾರೆ.

ಚಿತ್ರದ ನಾಯಕನಾಗಿ ದೇವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಸಮೃದ್ಧಿ ಈ ಚಿತ್ರದ ನಾಯಕಿ. ಜಿಮ್ ರವಿ, ಶೋಭ್ ರಾಜ್, ಶಿವರಾಂ, ತಬಲಾ ನಾಣಿ, ಕಡ್ಡಿಪುಡಿ ಚಂದ್ರು, ಕಾಕ್ರೋಜ್ ಸುಧೀ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು