ತಮಿಳು ನಟ, ನಿರ್ದೇಶಕ ಇ. ರಾಮದಾಸ್ ನಿಧನ

ಚೆನ್ನೈ: ತಮಿಳು ನಟ ಹಾಗೂ ನಿರ್ದೇಶಕ ಇ. ರಾಮದಾಸ್ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.
ರಾಮದಾಸ್ ನಿಧನದ ಬಗ್ಗೆ ಅವರ ಪುತ್ರ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೃದಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ರಾಮದಾಸ್ ಮಗ ಮಾಹಿತಿ ನೀಡಿದ್ದಾರೆ.
ರಾಮದಾಸ್ ನಿಧನಕ್ಕೆ ತಮಿಳುನಾಡು ಚಿತ್ರರಂದ ಗಣ್ಯರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಸ್ವಯಂವರಂ, ಧರ್ಮ ದೊರೈ, ರಾಜಾ ರಾತನ್ ಸೇರಿದಂತೆ ಹಲವಾರು ಜನಪ್ರಿಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.