ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳು ನಟ ಸೂರ್ಯ ಅಭಿನಯದ ‘ಕಂಗುವ‘ ಇದೇ ವರ್ಷ ತೆರೆಗೆ

Published 11 ಜನವರಿ 2024, 6:58 IST
Last Updated 11 ಜನವರಿ 2024, 6:58 IST
ಅಕ್ಷರ ಗಾತ್ರ

ಚೆನ್ನೈ: ತಮಿಳು ನಟ ಸೂರ್ಯ ಅಭಿನಯದ ‘ಕಂಗುವ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಇದೇ ವರ್ಷ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಟ ಸೂರ್ಯ,‘ ಸಿನಿಮಾದ ಕೊನೆ ಹಂತದ ಚಿತ್ರೀಕರಣ ಮುಗಿಸಿದ್ದೇವೆ. ಇದು ಒಂದರ ಮುಕ್ತಾಯ ಹಾಗೂ ಹಲವುಗಳ ಪ್ರಾರಂಭ ಎಂದು ಬರೆದುಕೊಂಡಿರುವ ಅವರು, ಚಿತ್ರತಂಡಕ್ಕೆ ಧನ್ಯವಾದ‘ ತಿಳಿಸಿದ್ದಾರೆ.

‘ಸಿಂಗಂ’, ‘ಪರುತ್ತಿವೀರನ್’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ಕೆ.ಇ.ಜ್ಞಾನವೇಲ್ ರಾಜ, ತಮ್ಮ ಸ್ಟೂಡಿಯೋ ಗ್ರೀನ್ ಸಂಸ್ಥೆಯಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರಜನಿಕಾಂತ್‌ ಅವರ ‘ಅಣ್ಣಾತ್ತೆ’ ಸೇರಿದಂತೆ ಹಿಟ್‌ ಸಿನಿಮಾಗಳನ್ನು ನೀಡಿದ್ದ ಶಿವ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಇದೇ ವರ್ಷ ಜಗತ್ತಿನಾದ್ಯಂತ 10 ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಇನ್ನೂ ತಿಳಿಸಿಲ್ಲ.

ಬಾಲಿವುಡ್‌ನ ಜನಪ್ರಿಯ ನಟಿ ದಿಶಾ ಪಠಾಣಿ ಈ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ‘ರಾಕ್ ಸ್ಟಾರ್’ ಎಂದೇ ಜನಪ್ರಿಯರಾಗಿರುವ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ, ವೆಟ್ರಿ ಪಳನಿಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT