ಬುಧವಾರ, ಮೇ 12, 2021
18 °C

ತಮಿಳು ನಟ ವಿವೇಕ್‌ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಮಿಳು ಚಿತ್ರನಟ ವಿವೇಕ್‌ ಅವರಿಗೆ ಹೃದಯಾಘಾತವಾಗಿದ್ದು ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಶುಕ್ರವಾರ ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದ ಅವರನ್ನು ತಕ್ಷಣವೇ ಪತ್ನಿ ಮತ್ತು ಮಗಳು ಆಸ್ಪತ್ರೆಗೆ ಸೇರಿಸಿದ್ದರು. ಗುರುವಾರ (ಏ.15) ಅವರು ಕೋವಿಡ್‌ ಲಸಿಕೆ ಪಡೆದಿದ್ದರು. ಅರ್ಹರಾದ ಎಲ್ಲರೂ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬೇಕು ಎಂಬ ಸಂದೇಶವನ್ನೂ ನೀಡಿದ್ದರು. 

ಕೋವಿಡ್‌ ಲಸಿಕೆ ಪಡೆದದ್ದಕ್ಕೂ ಹೃದಯಾಘಾತ ಸಂಭವಿಸಿದ್ದಕ್ಕೂ ಸಂಬಂಧವಿಲ್ಲ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.

2012ರಲ್ಲಿ ಹಿಂದಿಯ ವಿಕ್ಕಿ ದಾನಿ ಚಿತ್ರದ ತಮಿಳು ರಿಮೇಕ್‌ ಧರಳಪ್ರಭು ಚಿತ್ರದಲ್ಲಿ ಅವರು ಕಾಣಸಿಕೊಂಡಿದ್ದರು. ಕಮಲ್‌ ಹಸನ್‌ ಅವರ ಇಂಡಿಯನ್‌ –2ನಲ್ಲೂ ಅಭಿನಯಿಸಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು