ಶುಕ್ರವಾರ, ಫೆಬ್ರವರಿ 28, 2020
19 °C

₹200 ಕೋಟಿ ದಾಟಿದ ‘ತಾನಾಜಿ’ ಗಳಿಕೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಅಜಯ್ ದೇವಗನ್ ಅಭಿನಯದ ‘ತಾನಾಜಿ’ ಚಿತ್ರವು 2020ರಲ್ಲಿ ಬಾಕ್ಸ್ ಆಫೀಸ್‌ನಲ್ಲಿ ₹200 ಕೋಟಿಗಿಂತ ಹೆಚ್ಚು ಹಣ ಸಂಗ್ರಹಿಸಿದ ಮೊದಲ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ವಿಚಾರವನ್ನು ಚಿತ್ರದ ನಿರ್ಮಾಪಕರು ಶನಿವಾರ ಪ್ರಕಟಿಸಿದ್ದಾರೆ.

‘ತಾನಾಜಿ ಚಿತ್ರವು ಶುಕ್ರವಾರ ₹5.38 ಕೋಟಿ ಗಳಿಸಿದೆ. ಈ ಮೂಲಕ ಚಿತ್ರದ ಒಟ್ಟು ಗಳಿಕೆಯು ₹202.83 ಕೋಟಿ ಆದಂತಾಗಿದೆ’ ಎಂದು ನಿರ್ಮಾಪಕರು ಹೇಳಿದ್ದಾರೆ. ತಮ್ಮ ಚಿತ್ರವನ್ನು ಬ್ಲಾಕ್‌ಬಸ್ಟರ್‌ ಹಿಟ್‌ ಆಗಿಸಿದ್ದಕ್ಕೆ ಅಭಿಮಾನಿಗಳಿಗೆ ಅಜಯ್ ಅವರು ಧನ್ಯವಾದ ಸಮರ್ಪಿಸಿದ್ದಾರೆ.

ಓಮ್ ರಾವತ್ ನಿರ್ದೇಶನದ ಈ ಚಿತ್ರವು ಜನವರಿ 10ರಂದು ದೇಶದಾದ್ಯಂತ ತೆರೆ ಕಂಡಿದೆ. ತಾನಾಜಿ ಪಾತ್ರವನ್ನು ಅಜಯ್ ಅವರು ನಿಭಾಯಿಸಿದ್ದಾರೆ. ಸೈಫ್ ಆಲಿ ಖಾನ್, ಕಾಜೋಲ್ ಅವರೂ ಈ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು