ಬಿಯಾಂಡ್ ವಿಷನ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ತನುಜಾ’ ಸಿನಿಮಾದ ಫಸ್ಟ್‌ಲುಕ್ ಅನ್ನು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವ ಸುಧಾಕರ್ ಹಾಗೂ ಪತ್ರಕರ್ತ ವಿಶ್ವೇಶ್ವರ್ ಭಟ್ ಉಪಸ್ಥಿತರಿದ್ದರು.

ವಿಶ್ವೇಶ್ವರ ಭಟ್ ಅವರ ಲೇಖನವೊಂದರಿಂದ ಪ್ರಭಾವಿತರಾಗಿ ಹರೀಶ್ ಎಂ.ಡಿ. ಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ನೈಜಘಟನೆ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮಾರ್ಚ್ ಎರಡನೇ ವಾರದಿಂದ ಆರಂಭವಾಗಲಿದೆ. ಬೆಂಗಳೂರು, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 2016–17 ಸಾಲಿನ ರಾಜ್ಯಪ್ರಶಸ್ತಿಗೆ ಭಾಜನವಾಗಿದ್ದ ‘ಅಂತರ್ಜಲ’ ಚಿತ್ರವನ್ನು ನಿರ್ದೇಶಿಸಿದ್ದ ಹರೀಶ್ ಎಂ.ಡಿ. ಹಳ್ಳಿ ಅವರಿಗೆ ಇದು ಎರಡನೇ ಚಿತ್ರ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣವಿರುವ ‘ತನುಜಾ’ ಚಿತ್ರಕ್ಕೆ ಆರ್. ಚಂದ್ರಶೇಖರ್ ಪ್ರಸಾದ್ ಸಂಭಾಷಣೆ ಬರೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.