ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾರ್ಟಿನ್‌‘ ಟೀಸರ್‌: ಧ್ರುವ ಸರ್ಜಾ ಅಬ್ಬರಕ್ಕೆ ಅಭಿಮಾನಿಗಳು ಫುಲ್‌ ಖುಷ್‌

Last Updated 23 ಫೆಬ್ರವರಿ 2023, 14:43 IST
ಅಕ್ಷರ ಗಾತ್ರ

ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ನಟನೆಯ, ಎ.ಪಿ. ಅರ್ಜುನ್‌ ಆ್ಯಕ್ಷನ್‌ ಕಟ್‌ ಹೇಳಿರುವ ಪ್ಯಾನ್‌ ಇಂಡಿಯಾ ಸಿನಿಮಾ ‘ಮಾರ್ಟಿನ್‌’ ರಿಲೀಸ್‌ಗೆ ಸಜ್ಜಾಗಿದ್ದು, ಸಿನಿಮಾದ ಟೀಸರ್‌ ಗುರುವಾರ ಬಿಡುಗಡೆಯಾಗಿದೆ.

ಟೀಸರ್‌ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದೇ ಮೊದಲ ಬಾರಿಗೆ ವಿಐಪಿ ಅಭಿಮಾನಿಗಳಿಗೋಸ್ಕರ ಪೇಯ್ಡ್ ಪ್ರೀಮಿಯರ್ ಟೀಸರ್ ಪ್ರದರ್ಶನವನ್ನು ವೀರೇಶ್ ಚಿತ್ರಮಂದಿರದಲ್ಲಿ ಏರ್ಪಡಿಸಲಾಗಿತ್ತು. ಇಲ್ಲಿ ಸಂಗ್ರಹವಾದ ಹಣವನ್ನು ಗೋಶಾಲೆಗೆ ನೀಡುತ್ತಿದ್ದೇವೆ ಎಂದು ಚಿತ್ರದ ನಿರ್ಮಾಪಕ ಉದಯ್ ಕೆ.ಮೆಹ್ತಾ ಈ ಹಿಂದೆ ಹೇಳಿದ್ದರು.

ಧ್ರುವ ಸರ್ಜಾ ಅವರ ಕಟ್ಟುಮಸ್ತಾದ ಮೈಕಟ್ಟು, ನಟನೆ ಅವರ ಅಭಿಮಾನಿಗಳಿಗೆ ಸಖತ್‌ ಇಷ್ಟಚಾಗಿದೆ. ಮಾಸ್‌ ಕಥಾ ಹಂದರ ಈ ಸಿನಿಮಾ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಧ್ರುವ ಅವರಿಗೆ ತುಂಬಾ ಗೆಟಪ್ ಇದೆ.

ಹೈದರಾಬಾದ್‌, ವೈಜಾಗ್‌, ಕಾಶ್ಮೀರ ಹಾಗೂ ಮುಂಬೈನಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಪರೀಕ್ಷೆಗಳು, ಐಪಿಎಲ್, ಚುನಾವಣೆ ಮುಗಿದ ನಂತರ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿದೆ.

ಎ.ಪಿ.ಅರ್ಜುನ್‌ ನಿರ್ದೇಶನದ ‘ಅದ್ದೂರಿ’ ಸಿನಿಮಾ ಮೂಲಕವೇ ಸ್ಯಾಂಡಲ್‌ವುಡ್‌ಗೆ ಧ್ರುವ ಪ್ರವೇಶಿಸಿದ್ದರು. ಇದೇ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಮಾರ್ಟಿನ್‌’ ಮೇಲೆ ಜನರ ನಿರೀಕ್ಷೆ ಬಹಳಷ್ಟಿದೆ. ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT