ಸೋಮವಾರ, ಡಿಸೆಂಬರ್ 5, 2022
19 °C
ತೆಲುಗಿನ ಜನಪ್ರಿಯ ನಟ ಮಹೇಶ್ ಬಾಬು ಅವರಿಗೆ ಪಿತೃ ವಿಯೋಗ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೆಲುಗಿನ ಜನಪ್ರಿಯ ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಖ್ಯಾತಿಯ ನಟ ಕೃಷ್ಣ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಅವರನ್ನು ಭಾನುವಾರ ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳವಾರ ಬೆಳಗಿನ ಜಾವ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಮಹೇಶ್ ಬಾಬು ತಾಯಿ ಇಂದಿರಾ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ನಿಧನರಾಗಿದ್ದರು. ಮಹೇಶ್ ಸಹೋದರ ರಮೇಶ್ ಬಾಬು ಕಳೆದ ಜನವರಿಯಲ್ಲಿ ಮೃತಪಟ್ಟಿದ್ದರು. ಒಂದೇ ವರ್ಷದಲ್ಲಿ ಮಹೇಶ್ ಬಾಬು ಅವರ ಕುಟುಂಬಕ್ಕೆ ಎದುರಾದ ಅಘಾತದ ಬಗ್ಗೆ ಅಭಿಮಾನಿಗಳು ಸಂಕಟ ವ್ಯಕ್ತಪಡಿಸಿದ್ದಾರೆ.

ಕೃಷ್ಣ ಅವರು 350ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿ, ಸೂಪರ್ ಸ್ಟಾರ್ ಎಂದೇ ಜನಪ್ರಿಯತೆ ಗಳಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು