ಮಂಗಳವಾರ, ನವೆಂಬರ್ 30, 2021
20 °C

ತೆಲುಗು ನಟ ಜಯ ಪ್ರಕಾಶ್‌ ರೆಡ್ಡಿ ಹೃದಯಾಘಾತದಿಂದ ನಿಧನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅಮರಾವತಿ: ತೆಲುಗು ನಟ ಜಯ ಪ್ರಕಾಶ್‌ ರೆಡ್ಡಿ (74) ಅವರು ಮಂಗಳವಾರ ಬೆಳಿಗ್ಗೆ ಗುಂಟೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಜಯ ಪ್ರಕಾಶ್‌ ರೆಡ್ಡಿ ಖಳನಾಯಕ ಮತ್ತು ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು. ಅವರ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ‘ಸಮರಸಿಂಹ ರೆಡ್ಡಿ, ಪ್ರೇಮಿಂಚುಕುಂದಮು ರಾ, ನರಸಿಂಹ ನಾಯ್ಡು, ರೆಡಿ, ಕಿಕ್, ಜಯಂ ಮನದೇರಾ, ಜಂಬಾ ಲಕಿಡಿ ಪಂಬಾ’ ಪ್ರಮುಖವಾಗಿವೆ.

ಇದೇ ವರ್ಷ ಜನವರಿಯಲ್ಲಿ ಬಿಡುಗಡೆಯಾದ ಮಹೇಶ್ ಬಾಬು ಅಭಿನಯದ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಜಯಪ್ರಕಾಶ್‌ ಕಾಣಿಸಿಕೊಂಡಿದ್ದರು. 

ನಟನ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ನಟ–ನಟಿಯರು ಸಂತಾಪ ಸೂಚಿಸಿದ್ದಾರೆ.

Telugu cinema and theatre has lost a gem today with the demise of Jayaprakash Reddy Garu. His versatile performances...

Posted by Nara Chandrababu Naidu on Monday, September 7, 2020

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು