ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಶ್ ಜೊತೆ ನಟಿ ಪವಿತ್ರಾ ಲೋಕೇಶ್ ಮದುವೆ.. ಇದು ಸಿನಿಮಾ ದೃಶ್ಯವೇ?

Last Updated 11 ಮಾರ್ಚ್ 2023, 3:28 IST
ಅಕ್ಷರ ಗಾತ್ರ

ಹೈದರಾಬಾದ್: ಕನ್ನಡದ ನಟಿ ಪವಿತ್ರಾ ಲೋಕೇಶ್ ಜೊತೆ ವಿವಾಹವಾಗಿರುವ ವಿಡಿಯೊವನ್ನು ನಟ ನರೇಶ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

'ಈ ನಮ್ಮ ಹೊಸ ಪಯಣದಲ್ಲಿ ಜೀವನಪೂರ್ತಿ ಸಂತೋಷ ಮತ್ತು ಶಾಂತಿಗಾಗಿ ನಿಮ್ಮ ಆಶೀರ್ವಾದವನ್ನು ಕೋರುತ್ತಿದ್ದೇವೆ’ ಎಂದು ನರೇಶ್ ಬರೆದುಕೊಂಡಿದ್ದಾರೆ.


ಆದರೆ, ಇದು ಸಿನಿಮಾವೊಂದರ ದೃಶ್ಯ ಎಂದು ಕೆಲ ತೆಲುಗು ಮಾಧ್ಯಮಗಳು ವರದಿಮಾಡಿವೆ. ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿ ಅವರಿಗೆ ನರೇಶ್ ಇನ್ನಷ್ಟೆ ವಿಚ್ಛೇದನಾ ನೀಡಬೇಕಿದೆ ಎಂದು ವರದಿ ತಿಳಿಸಿದೆ.

ಎಂ.ಎಸ್. ರಾಜು ನಿರ್ದೇಶನದ ಹೊಸ ಸಿನಿಮಾದಲ್ಲಿ ನರೇಶ್ ಮತ್ತು ಪವಿತ್ರಾ ನಟಿಸುತ್ತಿದ್ದು, ಇದು ಆ ಸಿನಿಮಾ ದೃಶ್ಯವಾಗಿರುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪವಿತ್ರಾ ಲೋಕೇಶ್ ತಮ್ಮ ಪತಿ, ತೆಲುಗು ಚಿತ್ರನಟ ನರೇಶ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ’ ಎಂದು ಆರೋಪಿಸಿ ರಮ್ಯಾ ರಘುಪತಿ ಇತ್ತೀಚೆಗೆ ಮೈಸೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಗಲಾಟೆ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT