ಬುಧವಾರ, ಮೇ 27, 2020
27 °C

ಕೋವಿಡ್‌–19 ವಿರುದ್ಧ ಹೋರಾಡಲು ಪ್ರಭಾಸ್‌ ₹4 ಕೋಟಿ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ದೇಶದಲ್ಲಿ ಮಹಾಮಾರಿಯಾಗಿ ಹಬ್ಬುತ್ತಿರುವ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಬಾಹುಬಲಿ ಖ್ಯಾತಿಯ ನಟ ಪ್ರಭಾಸ್‌ ₹ 4 ಕೋಟಿ ದೇಣಿಗೆ ನೀಡಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ  ₹ 3 ಕೋಟಿ ಹಾಗೂ ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹ 50 ಲಕ್ಷ ದೇಣಿಗೆ ನೀಡಿದ್ದಾರೆ.

ಪ್ರಭಾಸ್‌ ಇತ್ತೀಚೆಗೆ  ಜಾರ್ಜಿಯಾದಿಂದ ಮರಳಿದ್ದಾರೆ. ಬಂದ ತಕ್ಷಣವೇ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ದೇಣಿಗೆ ನೀಡಿದ್ದಾರೆ. ಕಳೆದ 6 ದಿನಗಳಿಂದ ಪ್ರಭಾಸ್ ಸ್ವಯಂ ಪ್ರತ್ಯೇಕವಾಗಿದ್ದಾರೆ.

ಇನ್ನು ಹೆಸರಿಡದ ಚಿತ್ರದಲ್ಲಿ ಪ್ರಭಾಸ್‌ ನಟಿಸುತ್ತಿದ್ದು, ಪೂಜಾ ಹೆಗ್ಡೆ ಪ್ರಭಾಸ್‌ಗೆ ನಾಯಕಿಯಾಗಿದ್ದಾರೆ.  ಈ ಚಿತ್ರದ ಚಿತ್ರೀಕರಣ ಜಾರ್ಜಿಯದಲ್ಲಿ ನಡೆಯುತ್ತಿತ್ತು. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

ದೇಶದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದ್ದು 20 ಜನರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು