ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗು ನಟ ಪ್ರಭಾಸ್‌ ಅಭಿನಯದ ‘ಸಲಾರ್‘ ಚಿತ್ರದ ಮುಂಗಡ ಬುಕಿಂಗ್‌ ಆರಂಭ

Published 17 ಡಿಸೆಂಬರ್ 2023, 10:59 IST
Last Updated 17 ಡಿಸೆಂಬರ್ 2023, 10:59 IST
ಅಕ್ಷರ ಗಾತ್ರ

ಬೆಂಗಳೂರು: ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ, ತೆಲುಗು ಖ್ಯಾತ ನಟ ಪ್ರಭಾಸ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಸಲಾರ್ ಭಾಗ–1‘ ಇದೇ ಡಿಸೆಂಬರ್‌ 22ರಂದು ತೆರೆ ಕಾಣಲಿದೆ.

ಉತ್ತರ ಭಾರತದಲ್ಲಿ ‘ಸಲಾರ್ ಭಾಗ–1‘ ಚಿತ್ರದ ಮುಂಗಡ ಬುಕಿಂಗ್‌ ಅನ್ನು ಇಂದಿನಿಂದ ಆರಂಭಿಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್‌, ‘ಇಷ್ಟು ದಿನ ಕಾಯುತ್ತಿದ್ದ ಕ್ಷಣ ಇದೀಗ ಬಂದಿದೆ. ಉತ್ತರ ಭಾರತದಾದ್ಯಂತ ಚಿತ್ರದ ಮುಂಗಡ ಬುಕಿಂಗ್‌ ಆರಂಭಿಸಲಾಗಿದೆ‘ ಎಂದು ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ.

‘ಸಲಾರ್‌’ ಚಿತ್ರ ‘ಕೆ.ಜಿ.ಎಫ್‌.’ನಂತೆ ಎರಡು ಭಾಗಗಳಲ್ಲಿ ತೆರೆಕಾಣುತ್ತಿದೆ. ‘ಸಲಾರ್‌’ ಚಿತ್ರದ ಮೊದಲ ಭಾಗಕ್ಕೆ ‘ಸೀಸ್‌ ಫೈರ್‌’ ಎಂಬ ಅಡಿಬರಹವಿದೆ. ಹೊಂಬಾಳೆ ಫಿಲ್ಮ್ಸ್‌ನಡಿ ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸುಮಾರು ₹400 ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಿದೆ.

ಸಲಾರ್‌ ಚಿತ್ರ ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ. ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಖ್ಯಾತ ಕಲಾವಿದರು ನಟಿಸಿದ್ದು, ರವಿ ಬಸ್ರೂರು ಸಂಗೀತವಿದೆ.

ಬಾಲಿವುಡ್‌ ಬಾದ್‌ ಶಾ ಶಾರುಖ್ ಖಾನ್ ಅಭಿನಯದ ‘ಡುಂಕಿ‘ ಚಿತ್ರ ಡಿಸೆಂಬರ್‌ 21ರಂದು ತೆರೆ ಕಾಣುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT