ಶುಕ್ರವಾರ, ಮೇ 20, 2022
24 °C

ತೆಲುಗು ನಟ ಶ್ರೀವಾತ್ಸವ್ ಚಂದ್ರಶೇಖರ್ ನಿಗೂಢ ಸಾವು, ಆತ್ಮಹತ್ಯೆ ಶಂಕೆ: ವರದಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ನಟ ಶ್ರೀವಾತ್ಸವ್ ಚಂದ್ರಶೇಖರ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರು 2019ನೇ ವರ್ಷದಲ್ಲಿ ತಮಿಳು ಸೂಪರ್ ಸ್ಟಾರ್ ಧನುಷ್ ಜೊತೆಗೆ ತೆರೆ ಹಂಚಿಕೊಂಡಿದ್ದರು.

ಶ್ರೀವಾತ್ಸವ್ ಚಂದ್ರಶೇಖರ್ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದು, ಶುಕ್ರವಾರ ಅಂತ್ಯ ಸಂಸ್ಕಾರ ನೇರವೇರಿಸಲಾಗಿದೆ ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಂದೆ ಹೊಂದಿರುವ ಮನೆಯಲ್ಲೇ ಶ್ರೀವಾತ್ಸವ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿದೆ. ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದ ಶ್ರೀವಾತ್ಸವ್ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಧನುಷ್ ಜೊತೆಗೆ 'ಎನ್ನಯ್ ನೋಕಿ ಪಾಯುನ್ ತೊಟ್ಟಾ' ಸಿನಿಮಾದಲ್ಲಿ ಶ್ರೀವಾತ್ಸವ್ ಸಹ ನಟನಾಗಿ ಅಭಿನಯಿಸಿದ್ದರು. 'ವಲ್ಲಮಯ್ ತರುವಾಯೊ' ವೆಬ್ ಸಿರೀಸ್‌ನಲ್ಲೂ ಗುರುತಿಸಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು