ಹೈದರಾಬಾದ್: ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ಅಭಿನಯದ 75ನೇ ಸಿನಿಮಾ 'ಸೈಂಧವ್' ಡಿಸೆಂಬರ್ 22ರಂದು ಬಿಡುಗಡೆಯಾಗಲಿದೆ.
ಸೈಲೇಶ್ ಕೋಲನು ನಿರ್ದೇಶನದ 'ಸೈಂಧವ್' ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ದಕ್ಷಿಣ ಭಾಷೆಗಳು ಸೇರಿದಂತೆ ಹಿಂದಿಯಲ್ಲಿ ಬಿಡುಗಡೆಯಾಗಲಿದೆ.
ನಿಹಾರಿಕಾ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಬೋಯನಪಲ್ಲಿ ನಿರ್ಮಿಸಿರುವ 'ಸೈಂಧವ್' ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ ಮತ್ತು ಎಸ್.ಮಣಿಕಂದನ್ ಛಾಯಾಗ್ರಹಣವಿದೆ. ಗ್ಯಾರಿ ಬಿ.ಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದಾರೆ.
ಈ ಚಿತ್ರದ ಮೂಲಕ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಟಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರಮುಖ ನಟ– ನಟಿಯರು ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.
ವೆಂಕಟೇಶ್ 'ಸೈಂಧವ್' ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿರುವ ಚಿತ್ರದ ಪೋಸ್ಟರ್ ಈ ಹಿಂದೆ ಬಿಡುಗಡೆ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.